ಸೋಮವಾರ, ಜನವರಿ 20, 2020
27 °C
ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಕುಸಿದ ರಹಾನೆ, ಪೂಜಾರ

ಅಗ್ರಸ್ಥಾನ ಉಳಿಸಿಕೊಂಡ ವಿರಾಟ್

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ : ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಮಂಗಳವಾರ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್ ಕ್ರಿಕೆಟ್‌ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ 928 ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ಧಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ (911) ಅವರು ಎರಡನೇ ಸ್ಥಾನದಲ್ಲಿದ್ದಾರೆ.

ಭಾರತ ತಂಡದ ಟೆಸ್ಟ್ ಪರಿಣತ ಬ್ಯಾಟ್ಸ್‌ಮನ್ ಚೇತೇಶ್ವರ್  ಆರರಿಂದ ಏಳನೇ ಸ್ಥಾನಕ್ಕೆ ಇಳಿದಿದ್ದಾರೆ. ಅಜಿಂಕ್ಯ ರಹಾನೆ ಎರಡು ಸ್ಥಾನಗಳನ್ನು ಕಳೆದುಕೊಂಡಿದ್ದಾರೆ.

ಒಂದರ ಹಿಂದೆ ಒಂದು ಶತಕ ಹೊಡೆಯುತ್ತದ ಗಮನ ಸೆಳೆದಿರುವ ಆಸ್ಟ್ರೇಲಿಯಾದ ಯುವಪ್ರತಿಭೆ ಮಾರ್ನಸ್ ಲಾಬುಶೇನ್ ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ. 25 ವರ್ಷದ ಮಾರ್ನಸ್ ಈಚೆಗೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ದ್ವಿಶತಕ ಹೊಡೆದಿದ್ದರು.

ಬೌಲಿಂಗ್‌ನಲ್ಲಿ ಆರ್‌. ಅಶ್ವಿನ್ (772) ಮತ್ತು ಮೊಹಮ್ಮದ್ ಶಮಿ (771) ಕ್ರಮವಾಗಿ ಒಂಬತ್ತು ಮತ್ತು ಹತ್ತನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ವಿಭಾಗದಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್‌  (904) ಮೊದಲ ಸ್ಥಾನದಲ್ಲಿದ್ದಾರೆ.ನೀಲ್ ವಾಗ್ನರ್ (852) ಮತ್ತು ವೆಸ್ಟ್‌ ಇಂಡೀಸ್‌ನ ಜೇಸನ್ ಹೋಲ್ಡರ್ (830) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್‌ ವಿಭಾಗದಲ್ಲಿ; ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್‌ 15 ರಿಂದ 10ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್‌ನಲ್ಲಿ ಅವರು ಮಿಂಚಿದ್ದರು. ಅವರು ಟಾಪ್‌ 10  ಆಟಗಾರರಲ್ಲಿ ಸ್ಥಾನ ಪಡೆಯುತ್ತಿರುವುದು ಇದು ಎರಡನೇ ಸಲ.

 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು