ಮಂಗಳವಾರ, ಜನವರಿ 18, 2022
15 °C

ಪತ್ನಿ ಅನುಷ್ಕಾ, ಸಹ ಆಟಗಾರರೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡ ವಿರಾಟ್‌ ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಪತ್ನಿ ಅನುಷ್ಕಾ ಹಾಗೂ ಭಾರತ ತಂಡದ ಸಹ ಆಟಗಾರರೊಂದಿಗೆ ನಾಯಕ ವಿರಾಟ್‌ ಕೊಹ್ಲಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. 

ಈ ಕುರಿತ ಫೋಟೊಗಳನ್ನು ಟ್ವೀಟ್‌ ಮಾಡಿರುವ ಅವರು, ‘ಈ ಹೊಸ ವರ್ಷವು ಎಲ್ಲರಿಗೂ ಸಂತಸವನ್ನು ಕರುಣಿಸಲಿ ಎಂದು ನಾವು ಆಶಿಸುತ್ತೇವೆ. ಪ್ರೀತಿ ಹಾಗೂ ಧನಾತ್ಮಕತೆಯನ್ನು ನಾವು ನಿಮಗೆ ಕಳಿಸುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ನಲ್ಲಿ ಗುರುವಾರ ಮುಕ್ತಾಯಗೊಂಡ ಟೆಸ್ಟ್‌ ಪಂದ್ಯದಲ್ಲಿ ಭಾರತ 113 ರನ್‌ಗಳಿಂದ ಜಯ ಗಳಿಸಿತ್ತು. ಈ ಮೂಲಕ ಭಾರತ ತಂಡ ಸೆಂಚುರಿಯನ್‌ನಲ್ಲಿ ಮೊದಲ ಪಂದ್ಯ ಗೆದ್ದ ಸಾಧನೆ ಮಾಡಿತ್ತು. ಇದು ಭಾರತಕ್ಕೆ ವರ್ಷಾಂತ್ಯದಲ್ಲಿ ಸಂಭ್ರಮ ತಂದಿದೆ. 

ಸೆಂಚುರಿಯನ್‌ನಲ್ಲಿ ಭಾರತಕ್ಕೆ ಮೊದಲ ಜಯ ಗಳಿಸಿಕೊಟ್ಟ ನಾಯಕ ಎಂಬ ಖ್ಯಾತಿಗೆ ವಿರಾಟ್ ಕೊಹ್ಲಿ ಒಳಗಾಗಿದ್ದಾರೆ. ನಾಯಕನಾಗಿ 40ಕ್ಕೂ ಹೆಚ್ಚು ಟೆಸ್ಟ್‌ ಪಂದ್ಯಗಳನ್ನು ಗೆದ್ದ ನಾಲ್ಕನೇ ಆಟಗಾರನೆಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು