ಬುಧವಾರ, ಮೇ 12, 2021
27 °C

ಕೆಎಸ್‌ಸಿಎ ಟಿ20: ವಲ್ಚರ್ಸ್ ಕ್ಲಬ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಂಘಟಿತ ಆಟ ಪ್ರದರ್ಶಿಸಿದ ವಲ್ಚರ್ಸ್ ಕ್ರಿಕೆಟ್ ಕ್ಲಬ್ ತಂಡ ಕೆಎಸ್‌ಸಿಎ ಟಿ20 ಕ್ರಿಕೆಟ್ ಟೂರ್ನಿಯ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ವಲ್ಚರ್ಸ್ ಕ್ಲಬ್ ಸ್ವಸ್ತಿಕ್ ಯೂನಿಯನ್ ಕ್ರಿಕೆಟ್ ಕ್ಲಬ್‌ (1) ವಿರುದ್ಧ ಆರು ವಿಕೆಟ್‌ಗಳ ಜಯ ಗಳಿಸಿತು. 

ಮೊದಲು ಬ್ಯಾಟಿಂಗ್ ಮಾಡಿದ ಸ್ವಸ್ತಿಕ್ ಯೂನಿಯನ್ ಎಂಟು ವಿಕೆಟ್ ಕಳೆದುಕೊಂಡು 113 ರನ್ ಕಲೆ ಹಾಕಿತ್ತು. ಗುರಿ ಬೆನ್ನತ್ತಿದ ವಲ್ಚರ್ಸ್‌ ಕ್ಲಬ್ 19ನೇ ಓವರ್‌ನಲ್ಲಿ ಗೆಲುವಿನ ದಡ ಸೇರಿತು.

ಸಂಕ್ಷಿಪ್ತ ಸ್ಕೋರು: ಸ್ವಸ್ತಿಕ್ ಯೂನಿಯನ್ ಕ್ರಿಕೆಟ್ ಕ್ಲಬ್‌ (1): 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 113 (ಕೆ.ಗೌತಮ್ 30; ದರ್ಶನ್ ಎಂ.ಬಿ 33ಕ್ಕೆ2, ಜೆ.ಸುಚಿತ್ 33ಕ್ಕೆ2); ವಲ್ಚರ್ಸ್‌ ಕ್ರಿಕೆಟ್ ಕ್ಲಬ್‌: 18.2 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 119 (ಡಿ.ನಿಶ್ಚಲ್ 22, ಕರುಣ್ ನಾಯರ್ 23, ಅನಿರುದ್ಧ ಜೋಶಿ ಔಟಾಗದೆ 21, ಪ್ರವೀಣ್ ದುಬೆ ಔಟಾಗದೆ 30; ಆನಂದ ದೊಡ್ಡಮನಿ 25ಕ್ಕೆ2). ಫಲಿತಾಂಶ: ವಲ್ಚರ್ಸ್‌ ಕ್ರಿಕೆಟ್ ಕ್ಲಬ್‌ಗೆ ಆರು ವಿಕೆಟ್‌ಗಳ ಜಯ; ಪ್ರಶಸ್ತಿ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು