ಶುಕ್ರವಾರ, ಏಪ್ರಿಲ್ 3, 2020
19 °C

ಕ್ರಿಕೆಟ್‌: ಅಜರುದ್ದೀನ್ ಸ್ಟ್ಯಾಂಡ್ ಉದ್ಘಾಟಿಸಿದ ಲಕ್ಷ್ಮಣ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್: ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಮೊಹ ಮ್ಮದ್ ಅಜರುದ್ದೀನ್ ಅವರ ಹೆಸರನ್ನು ಇಡಲಾದ ರಾಜೀವಗಾಂಧಿ ಕ್ರಿಕೆಟ್ ಕ್ರೀಡಾಂಗಣದ ಉತ್ತರ ಭಾಗದ ಸ್ಟ್ಯಾಂಡ್‌ ಅನ್ನುಹಿರಿಯ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಜರುದ್ದೀನ್, ‘ಇಂತಹ ದೊಡ್ಡ ಗೌರವ ಲಭಿಸಿರುವುದಕ್ಕೆ ಸಂತಸವಾಗಿದೆ. ನಿಜ ವಾದ ಕ್ರೀಡಾ ಮನೋಭಾವದಿಂದ ಆಡಿದ್ದೆ. ಈಗ ಕ್ರಿಕಟ್ ಅಭಿವೃದ್ಧಿಗಾಗಿ ತನು, ಮನದಿಂದ ಶ್ರಮಿಸುತ್ತಿದ್ದೇನೆ’ ಎಂದರು.

‘ನಾನು ಇವತ್ತು ಏನೇ ಇದ್ದರೂ ಕ್ರಿಕೆಟ್ ಕಾರಣ. ಈ ಕ್ರೀಡೆಯ ಋಣ ನನ್ನ ಮೇಲಿದೆ. ಅದನ್ನು ತೀರಿಸಲು ಸದಾ ದುಡಿಯುತ್ತೇನೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು