ಸೋಮವಾರ, ಸೆಪ್ಟೆಂಬರ್ 20, 2021
20 °C

ಫಲಿತಾಂಶಗಳಿಂದ ಭಾವನಾತ್ಮಕವಾಗಿ ದೂರ ಉಳಿಯುತ್ತಿದ್ದ ಎಂ.ಎಸ್.ದೋನಿ: ಲಕ್ಷ್ಮಣ್

ಪಿಟಿಐ Updated:

ಅಕ್ಷರ ಗಾತ್ರ : | |

MS Dhoni

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅವರು ಪಂದ್ಯಗಳ ಫಲಿತಾಂಶಗಳಿಂದ ಭಾವುಕರಾಗುತ್ತಿರಲಿಲ್ಲ. ಇದೂ ಅವರ ಯಶಸ್ಸಿಗೆ ಪ್ರಮುಖ ಕಾರಣ ಎಂದು ಮಾಜಿ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಹೇಳಿದ್ದಾರೆ.

‘ಭಾರತ ಕ್ರಿಕೆಟ್ ತಂಡದ ನಾಯಕತ್ವ ವಹಿಸಿಕೊಳ್ಳುವುದು ಬಹುಶಃ ಯಾರಿಗೇ ಆದರೂ ಕಠಿಣ ಸವಾಲು ಎಂಬುದು ನನ್ನ ಭಾವನೆ. ಏಕೆಂದರೆ ಪ್ರಪಂಚದಾದ್ಯಂತ ಪ್ರತಿಯೊಬ್ಬರಿಂದಲೂ ತಂಡದ ಮೇಲೆ ಸಾಕಷ್ಟು ನಿರೀಕ್ಷೆಗಳಿರುತ್ತವೆ. ಆದರೆ, ಧೋನಿ ಅವರು ಯಾವಾಗಲೂ ಫಲಿತಾಂಶಗಳಿಂದ ಭಾವನಾತ್ಮಕವಾಗಿ ದೂರ ಉಳಿಯುತ್ತಿದ್ದರು’ ಎಂದು ಸ್ಟಾರ್ ಸ್ಪೋರ್ಟ್ಸ್ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಲಕ್ಷ್ಮಣ್ ಹೇಳಿದ್ದಾರೆ.

ಇದನ್ನೂ ಓದಿ: ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಧೋನಿ, ರೈನಾ ವಿದಾಯ

‘ಹೇಗೆ ವರ್ತಿಸಬೇಕು, ನಮ್ಮ ದೇಶದ ರಾಯಭಾರಿಗಳಾಗುವುದು ಹೇಗೆ? ಸಾರ್ವಜನಿಕವಾಗಿ ನಮ್ಮನ್ನು ನಾವು ಹೇಗೆ ಪ್ರಚುರಪಡಿಸಬೇಕು ಎಂಬ ವಿಚಾರದಲ್ಲಿ ಧೋನಿ ಅವರು ಕ್ರೀಡಾ ಅಭಿಮಾನಿಗಳನ್ನು ಮಾತ್ರವಲ್ಲದೆ ಲಕ್ಷಾಂತರ ಭಾರತೀಯರನ್ನು ಪ್ರೇರೇಪಿಸಿದ್ದಾರೆ. ಅದಕ್ಕಾಗಿಯೇ ಅವರು ತುಂಬಾ ಗೌರವಕ್ಕೆ ಪಾತ್ರರಾಗಿದ್ದಾರೆ’ ಎಂದು ಲಕ್ಷ್ಮಣ್ ಹೇಳಿದ್ದಾರೆ.

ಧೋನಿ ಅವರು ಆಗಸ್ಟ್ 15ರಂದು ಸಂಜೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಧೋನಿ ನಾಯಕತ್ವದಲ್ಲಿ ಭಾರತ ತಂಡವು 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. 2014ರಲ್ಲಿ ಅವರು ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಇದನ್ನೂ ಓದಿ: ಮಹೇಂದ್ರಸಿಂಗ್ ಧೋನಿ ಬರೆದ ದಾಖಲೆಗಳ ಪಟ್ಟಿ ಇದು...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು