ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೇವಿಡ್ ವಾರ್ನರ್‌ಗೆ ಶಸ್ತ್ರಚಿಕಿತ್ಸೆ

Last Updated 21 ಜನವರಿ 2019, 16:02 IST
ಅಕ್ಷರ ಗಾತ್ರ

ಸಿಡ್ನಿ : ಚೆಂಡು ವಿರೂಪ ಪ್ರಕರಣದಲ್ಲಿ ಸಿಲುಕಿ ನಿಷೇಧಕ್ಕೆ ಒಳಗಾಗಿರುವ ಆಸ್ಟ್ರೇಲಿಯಾದ ಹಿರಿಯ ಕ್ರಿಕೆಟಿಗ ಡೇವಿಡ್ ವಾರ್ನರ್‌ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ ಆಡುವಾಗ ಅವರ ಮೊಣಕೈಗೆ ಗಾಯವಾಗಿತ್ತು. ಮಂಗಳವಾರ ಶಸ್ತ್ರಚಿಕಿತ್ಸೆ ನಡೆಯಲಿದೆ.

‘ಅವರ ಗಾಯ ಗಂಭೀರವಲ್ಲ. ಆದರೂ ಸಾಮಾನ್ಯ ಶಸ್ತ್ರ ಚಿಕಿತ್ಸೆ ಅಗತ್ಯವಿದೆ’ ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಕಟಣೆ ತಿಳಿಸಿದೆ.

ವಾರ್ನರ್ ಅವರೊಂದಿಗೆ ನಿಷೇಧಕ್ಕೆ ಒಳಗಾಗಿರುವ ಮತ್ತೊಬ್ಬ ಆಟಗಾರ ಸ್ಟೀವ್ ಸ್ಮಿತ್‌ ಕಳೆದ ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರಿಗೆ ಆರು ವಾರಗಳ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT