ನಾಳೆ ಭಾರತ, ಪಾಕಿಸ್ತಾನ ಮುಖಾಮುಖಿ
ಭಾರತ ಹಾಗೂ ಪಾಕಿಸ್ತಾನ ತಂಡಗಳು ನಾಳೆ (ಭಾನುವಾರ) ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಕದನಕ್ಕೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿದೆ. ಆದರೆ, ರಾಜತಾಂತ್ರಿಕ ಕಾರಣದಿಂದಾಗಿ ಪಾಕ್‌ಗೆ ತೆರಳಲು ನಿರಾಕರಿಸಿರುವ ಭಾರತ, ತನ್ನ ಪಾಲಿನ ಎಲ್ಲ ಪಂದ್ಯಗಳನ್ನು 'ಹೈಬ್ರಿಡ್ ಮಾದರಿ'ಯಲ್ಲಿ ದುಬೈ ಕ್ರೀಡಾಂಗಣಗಳಲ್ಲಿ ಆಡುತ್ತಿದೆ.