ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಷಾರಾಮಿ ಬೇಡ, ಮೂಲಸೌಕರ್ಯ ಒದಗಿಸಿ: ವಿಂಡೀಸ್ ಕ್ರಿಕೆಟ್ ಮಂಡಳಿಗೆ ಪಾಂಡ್ಯ

Published 2 ಆಗಸ್ಟ್ 2023, 7:00 IST
Last Updated 2 ಆಗಸ್ಟ್ 2023, 7:00 IST
ಅಕ್ಷರ ಗಾತ್ರ

ತರೌಬಾ (ಟ್ರಿನಿಡಾಡ್): ವೆಸ್ಟ್‌ಇಂಡೀಸ್‌ನಲ್ಲಿ ತಮಗೆ ಮೂಲಸೌಕರ್ಯ ಕೊರತೆ ಎದುರಾದ ಬಗ್ಗೆ ಭಾರತ ಏಕದಿನ ಕ್ರಿಕೆಟ್ ತಂಡದ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯು ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು ಮತ್ತು ಅವುಗಳನ್ನು ಪರಿಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ನೇತೃತ್ವದಲ್ಲಿ ಭಾರತ ತಂಡವು 3ನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು 200 ರನ್‌ಗಳ ಅಂತರದಿಂದ ಸೋಲಿಸಿ ಏಕದಿನ ಸರಣಿಯನ್ನು 2-1ರಿಂದ ವಶಪಡಿಸಿಕೊಂಡಿತು. ನಾಯಕ ಪಾಂಡ್ಯ 52 ಎಸೆತಗಳಲ್ಲಿ ಅಜೇಯ 70 ರನ್ ಗಳಿಸಿ ಮಿಂಚಿದ್ದರು.

‘ಇದು ನಾವು ಆಡಿದ ಉತ್ತಮ ಮೈದಾನಗಳಲ್ಲಿ ಒಂದಾಗಿದೆ. ಆದರೆ, ನಮ್ಮ ಪ್ರವಾಸದಲ್ಲಿ ಹಲವು ಮೂಲಭೂತ ಸೌಕರ್ಯಗಳ ಕೊರತೆ ಇದ್ದವು. ನಾವು ಮುಂದಿನ ಬಾರಿ ವೆಸ್ಟ್ ಇಂಡೀಸ್‌ಗೆ ಬರುವ ಹೊತ್ತಿಗೆ ಎಲ್ಲವೂ ಉತ್ತಮವಾಗಬಹುದು ಎಂದು ಭಾವಿಸುತ್ತೇನೆ’ ಎಂದು ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಪಂದ್ಯದ ಬಳಿಕ ಹಾರ್ದಿಕ್ ಹೇಳಿದರು. .

‘ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯು ಈ ಬಗ್ಗೆ ಗಮನ ಹರಿಸಬೇಕಾದ ಸಮಯವಿದು. ನಾವು ಇಲ್ಲಿಗೆ ಬಂದಾಗ ಐಷಾರಾಮಿ ಸೌಲಭ್ಯ ಬಯಸುವುದಿಲ್ಲ. ಕೊನೆ ಪಕ್ಷ ಕನಿಷ್ಠ ಮೂಲಸೌಕರ್ಯ ಖಚಿತಪಡಿಸಬೇಕಿದೆ’ ಎಂದು ಅವರು ಅಸಮಾಧಾನ ಹೊರ ಹಾಕಿದ್ದಾರೆ.

ಮಂಗಳವಾರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶಾನ್ 77, ಶುಭಮನ್ ಗಿಲ್ 85 ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಸಿಡಿಸಿದ ಅಜೇಯ 70 ರನ್ ನೆರವಿನಿಂದ ಟೀಮ್ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 351 ರನ್ ಪೇರಿಸಿತ್ತು. ಬೃಹತ್ ಮೊತ್ತ ಬೆನ್ನಟ್ಟಿದ ವಿಂಡೀಸ್ 35.3 ಓವರ್‌ಗಳಲ್ಲಿ 151 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಳೆಯಿಂದ ಐದು ಪಂದ್ಯಗಳ ಟ್ವೆಂಟಿ-20 ಸರಣಿ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT