ಶನಿವಾರ, ಡಿಸೆಂಬರ್ 5, 2020
21 °C

ಈ ಬಾರಿ ನಾವು ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಲಿಲ್ಲ: ಎಂ.ಎಸ್‌.ಧೋನಿ

ಪಿಟಿಐ Updated:

ಅಕ್ಷರ ಗಾತ್ರ : | |

ಶಾರ್ಜಾ: ಮಹೇಂದ್ರ ಸಿಂಗ್‌ ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ.

ಸಿಎಸ್‌ಕೆ ತಂಡ ಆಡಿರುವ 11 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು ಎಂಟರಲ್ಲಿ ಸೋತಿದೆ. 6 ಅಂಕಗಳೊಂದಿಗೆ ಪಾಯಿಂಟ್ಸ್‌ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಶುಕ್ರವಾರ ಮುಂಬೈ ಇಂಡಿಯನ್ಸ್‌ ವಿರುದ್ಧ ಪಂದ್ಯ ಸೋತ ಬಳಿಕ ಮಾತನಾಡಿದ ಅವರು, ‘ವಿಶೇಷವಾಗಿ ಈ ವರ್ಷ ನಮ್ಮದಲ್ಲ. 8 ಅಥವಾ 10 ವಿಕೆಟ್‌ಗಳಿಂದ ಸೋತರೂ ಅದು ಅಷ್ಟೇನೂ ಮುಖ್ಯವಲ್ಲ. ಆದರೆ, ಈ ಹಂತದಲ್ಲಿ ಪಾಯಿಂಟ್ಸ್‌ ಪಟ್ಟಿಯಲ್ಲಿ ನಾವು ಎಲ್ಲಿದ್ದೇವೆ ಎಂಬುದು ಮುಖ್ಯವಾಗುತ್ತದೆ. ಇದರಿಂದ ನೋವುಂಟಾಗಿದೆ’ ಎಂದು ಹೇಳಿದ್ದಾರೆ.

ತಂಡದ ಹಿನ್ನೆಡೆಗೆ 100 ಕಾರಣಗಳು ಇರಬಹುದು, ಆದರೆ ಪರಿಸ್ಥಿತಿಗೆ ತಕ್ಕಂತೆ ನಮ್ಮ ಸಾಮರ್ಥ್ಯವನ್ನು ತೋರಿಸುವಲ್ಲಿ ನಾವು ಎಡವಿದ್ದೇವೆ. ಜೊತೆಗೆ ಅದೃಷ್ಟ ಕೂಡ ಈ ಬಾರಿ ತಂಡದ ಪರವಾಗಿಲ್ಲ ಎಂದು ತಿಳಿಸಿದ್ದಾರೆ.

‘ಅಂಬಟಿ ರಾಯುಡು ಗಾಯಗೊಂಡಿದ್ದರು. ಜೊತೆಗೆ, ನಾವು ಮೊದಲು ಬ್ಯಾಟಿಂಗ್‌ ಮಾಡಲು ಬಯಸಿದ ಪಂದ್ಯಗಳಲ್ಲಿ ನಾವು ಟಾಸ್‌ ಗೆಲ್ಲುತ್ತಿರಲಿಲ್ಲ. ಬಳಿಕ ಗುರಿ ಬೆನ್ನತ್ತಿದ್ದ ವೇಳೆ ಇಬ್ಬನಿ ಹೆಚ್ಚು ಬೀಳುತ್ತಿತ್ತು. ಒಟ್ಟಾರೆ ಬ್ಯಾಟಿಂಗ್‌ ವಿಭಾಗದಲ್ಲಿ ವೈಫಲ್ಯ ಅನುಭವಿಸಿದ್ದು ನಿಜ. ಆದರೆ, ಅದು ಆಟದ ಒಂದು ಭಾಗವೆಂದು’ ಹೇಳಿದ್ದಾರೆ.

‘ಮುಂಬರುವ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನಿಟ್ಟಿನಲ್ಲಿ ಯೋಚಿಸುವುದು ಹೆಚ್ಚು ಸೂಕ್ತ ಎಂದು ನಾನು ಭಾವಿಸುತ್ತೇನೆ. ಉಳಿದ ಮೂರು ಪಂದ್ಯಗಳಲ್ಲಿ ಯುವಕರಿಗೆ ಹೆಚ್ಚು ಅವಕಾಶ ನೀಡಲಾಗುತ್ತದೆ’ ಎಂದು ಹೇಳಿದ್ದಾರೆ.

ಮುಂದಿನ ವರ್ಷ ಯುವಕರನ್ನು ಗಮನದಲ್ಲಿಟ್ಟುಕೊಂಡು ಯಾರು ಉತ್ತಮ ಬ್ಯಾಟಿಂಗ್‌ ಮಾಡುತ್ತಾರೆ. ಯಾರು ಒತ್ತಡಕ್ಕೆ ಅನುಗುಣವಾಗಿ ಬೌಲಿಂಗ್‌ ಮಾಡುತ್ತಾರೆ ಎಂಬುದನ್ನು ಪರಿಗಣಿಸಿ ಹೆಚ್ಚು ಅವಕಾಶ ನೀಡಲಾಗುತ್ತದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು