ಬುಧವಾರ, ಜುಲೈ 6, 2022
21 °C

IPL 2022: ಪಂದ್ಯ ಗೆದ್ದರೂ ಬ್ಯಾಟಿಂಗ್ ಬಗ್ಗೆ ರಾಹುಲ್ ಅಸಮಾಧಾನ

ಪಿಟಿಐ Updated:

ಅಕ್ಷರ ಗಾತ್ರ : | |

ಪುಣೆ: ಐಪಿಎಲ್ ಟ್ವೆಂಟಿ-20 ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ 20 ರನ್ ಅಂತರದ ಗೆಲುವು ದಾಖಲಿಸಿದೆ.

ಪಂಜಾಬ್ ವಿರುದ್ಧ ಪಂದ್ಯ ಗೆದ್ದರೂ ಲಖನೌ ನಾಯಕ ರಾಹುಲ್, ತಂಡದ ಕಳಪೆ ಬ್ಯಾಟಿಂಗ್ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: 

ಮೊದಲ ಇನ್ನಿಂಗ್ಸ್‌ನ ಕೊನೆಯಲ್ಲಿ ಬ್ಯಾಟಿಂಗ್ ಮಾಡಿದ ರೀತಿಯ ಬಗ್ಗೆ ನಿರಾಶೆಗೊಂಡಿದ್ದೇನೆ. ಇದು ಮೂರ್ಖತನದ ಕ್ರಿಕೆಟ್ ಆಗಿತ್ತು ಎಂದು ಹೇಳಿದ್ದಾರೆ.

ಬ್ಯಾಟಿಂಗ್‌ನಲ್ಲಿ ಉತ್ತಮ ನಿರ್ವಹಣೆ ನೀಡಬೇಕಿದೆ. ಕ್ವಿಂಟನ್ ಡಿ ಕಾಕ್ ಹಾಗೂ ದೀಪಕ್ ಹೂಡಾ ಉತ್ತಮ ಜೊತೆಯಾಟ ಕಟ್ಟಿದರು. ನಾವು ಸ್ಮಾರ್ಟ್ ಕ್ರಿಕೆಟ್ ಆಡಿದ್ದರೆ 180-190 ರನ್ ಗಳಿಸಬಹುದಿತ್ತು ಎಂದು ತಿಳಿಸಿದ್ದಾರೆ.

ಪಂದ್ಯವನ್ನು ಗ್ರಹಿಸುವಲ್ಲಿ ನಾವು ಮತ್ತಷ್ಟು ಚುರುಕಾಗಿರಬೇಕು. ಕೆಟ್ಟ ಹೊಡೆತಗಳನ್ನು ಆಡದಿದ್ದರೆ ಉತ್ತಮ ಮೊತ್ತ ಕಲೆ ಹಾಕಬಹುದಿತ್ತು. ಆದರೂ ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಉತ್ತಮ ನಿರ್ವಹಣೆ ನೀಡಿದ್ದೇವೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು