ಶನಿವಾರ, ನವೆಂಬರ್ 27, 2021
21 °C

ಮುಂಬೈ ದಾಳಿಗೆ 13 ವರ್ಷ: ಈ ದಿನವನ್ನು ಎಂದಿಗೂ ಮರೆಯಲಾರೆ ಎಂದ ವಿರಾಟ್ ಕೊಹ್ಲಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಭಾರತದ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ ತಂಡದ ನಾಯಕ ವಿರಾಟ್ ಕೊಹ್ಲಿ ಮುಂಬೈ ದಾಳಿ ದುರಂತವನ್ನು ಮರೆಯಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

2008ರ ನವೆಂಬರ್ 26ರಂದು ಲಷ್ಕರ್‌–ಎ–ತೈಯಬಾ ಸಂಘಟನೆ ಉಗ್ರರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ 18 ಜನ ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಮೃತಪಟ್ಟಿದ್ದರು.

ಈ ದುರಂತಕ್ಕೆ ಇದೀಗ 13 ವರ್ಷ ತುಂಬಿದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕೊಹ್ಲಿ, ಈ ದಿನವನ್ನು ಮತ್ತು ಪ್ರಾಣ ಕಳೆದುಕೊಂಡವರನ್ನು ನಾವು ಎಂದಿಗೂ ಮರೆಯುವುದಿಲ್ಲ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ಮತ್ತು ಸ್ನೇಹಿತರಿಗಾಗಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. 

ವಿಶ್ರಾಂತಿಯಲ್ಲಿ ವಿರಾಟ್
ನಿರಂತರ ಕ್ರಿಕೆಟ್‌ನಿಂದ ಬಳಲಿರುವ ವಿರಾಟ್, ಸದ್ಯ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟಿ20 ಮತ್ತು ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ದೂರ ಉಳಿದಿದ್ದಾರೆ.

ಅವರ ಅನುಪಸ್ಥಿತಿಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಗುರುವಾರದಿಂದ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದ ಒಂದನೇ ಇನಿಂಗ್ಸ್‌ನಲ್ಲಿ ಅಜಿಂಕ್ಯ ರಹಾನೆ ಪಡೆ, 345 ರನ್ ಗಳಿಸಿ ಆಲೌಟ್ ಆಗಿದೆ. ಪದಾರ್ಪಣೆ ಪಂದ್ಯ ಆಡಿದ ಶ್ರೇಯಸ್ ಅಯ್ಯರ್ ಶತಕ (105 ರನ್) ಸಿಡಿಸಿ ಮಿಂಚಿದ್ದಾರೆ.

ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ನ್ಯೂಜಿಲೆಂಡ್ ವಿಕೆಟ್ ನಷ್ಟವಿಲ್ಲದೆ 89 ರನ್ ಗಳಿಸಿ ದಿಟ್ಟ ಆಟವಾಡುತ್ತಿದೆ.

ಇವನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು