ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ-20 ವಿಶ್ವಕಪ್ ಬಳಿಕ ನಿವೃತ್ತಿಯಾಗುವುದಾಗಿ ಡ್ವೇನ್ ಬ್ರಾವೋ ಘೋಷಣೆ

Last Updated 5 ನವೆಂಬರ್ 2021, 7:44 IST
ಅಕ್ಷರ ಗಾತ್ರ

ದುಬೈ: ಟಿ–20 ವಿಶ್ವಕಪ್‌ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ ವೆಸ್ಟ್‌ ಇಂಡೀಸ್‌ ಆಲೌರೌಂಡರ್‌ ಡ್ವೇನ್ ಬ್ರಾವೋ ಅವರು ಶುಕ್ರವಾರ ಘೋಷಿಸಿದ್ದಾರೆ.

ಗುರುವಾರ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ ಸೋಲು ಅನುಭವಿಸುವ ಮೂಲಕ ಸೆಮಿಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದೆ.

ಪಂದ್ಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ 38 ವರ್ಷದ ಡ್ವೇನ್‌ ಬ್ರಾವೋ, ‘ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಲು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ. ನಾನು ಉತ್ತಮ ವೃತ್ತಿಜೀವನವನ್ನು ಹೊಂದಿದ್ದು, ಕೆಲವು ಬಾರಿ ಏರಿಳಿತಗಳನ್ನು ಅನುಭವಿಸಿದ್ದೇನೆ. ಆದರೆ, ಇಷ್ಟು ದಿನ ಆಡುವುದಕ್ಕೆ ಅವಕಾಶ ಮಾಡಿಕೊಟ್ಟ ಕ್ರಿಕೆಟ್‌ ಮಂಡಳಿ ಹಾಗೂ ಬೆಂಬಲಿಸಿದ ಅಭಿಮಾನಿಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ.

ಬ್ರಾವೋ 2006ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟಿ–20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಈವರೆಗೆ 90 ಪಂದ್ಯಗಳನ್ನು ಆಡಿರುವ ಅವರು 1,245 ರನ್ ಗಳಿಸಿದ್ದು, 78 ವಿಕೆಟ್‌ ಪಡೆದಿದ್ದಾರೆ.

ಬ್ರಾವೋ ಈ ಹಿಂದೆಯೂ 2018ರಲ್ಲಿ ನಿವೃತ್ತಿ ಘೋಷಿಸಿದ್ದರು. ಬಳಿಕ 2019ರಲ್ಲಿ ನಿವೃತ್ತಿ ವಾಪಸ್ ಪಡೆದು ಮತ್ತೆ ವೆಸ್ಟ್​ ಇಂಡೀಸ್ ತಂಡ ಸೇರಿಕೊಂಡಿದ್ದರು.

2012, 2016ರ ಟಿ–20 ವಿಶ್ವಕಪ್ ಗೆದ್ದ ವೆಸ್ಟ್ ಇಂಡೀಸ್ ತಂಡದಲ್ಲಿ ಬ್ರಾವೋ ಪ್ರಮುಖ ಪಾತ್ರವಹಿಸಿದ್ದರು.

ಸದ್ಯ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯಲ್ಲಿ ವೆಸ್ಟ್‌ ಇಂಡೀಸ್‌, ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸಿದೆ. ಉಳಿದಂತೆ ಇಂಗ್ಲೆಂಡ್‌, ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ವಿರುದ್ಧ ಸೋಲು ಅನುಭವಿಸಿದೆ. ಈ ವಾರಾಂತ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ವೆಸ್ಟ್ ಇಂಡೀಸ್ ಸೆಣಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT