ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಸ್ಟ್‌ ಇಂಡೀಸ್ ಆಟಗಾರ ಕೀರನ್‌ ಪೊಲಾರ್ಡ್‌ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

Last Updated 20 ಏಪ್ರಿಲ್ 2022, 16:32 IST
ಅಕ್ಷರ ಗಾತ್ರ

ಮುಂಬೈ: ವೆಸ್ಟ್‌ ಇಂಡೀಸ್ ಕ್ರಿಕೆಟಿಗ ಕೀರನ್‌ ಪೊಲಾರ್ಡ್‌ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಬುಧವಾರ ವಿದಾಯ ಹೇಳಿದ್ದಾರೆ.

ಬಹಳಷ್ಟು ಯೋಚಿಸಿದ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಆಡುತ್ತಿದ್ದಾರೆ.

34 ವರ್ಷ ವಯಸ್ಸಿನ ಪೊಲಾರ್ಡ್‌ 2007ರಲ್ಲಿ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಕೊನೆಯ ಸರಣಿಯನ್ನು ಭಾರತ ತಂಡದ ವಿರುದ್ಧ ಆಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT