ಶನಿವಾರ, ಜುಲೈ 31, 2021
27 °C
ಇಂಗ್ಲೆಂಡ್‌ ವಿರುದ್ಧ ಸರಣಿ

ಟೆಸ್ಟ್‌ ಪದಾರ್ಪಣೆ ವಿಶ್ವಾಸದಲ್ಲಿ ಓಷೇನ್‌

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮುಂದಿನ ತಿಂಗಳು ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಸರಣಿಯಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ವಿಶ್ವಾಸ ತಮಗೆ ಇದೆ ಎಂದು ವೆಸ್ಟ್‌ ಇಂಡೀಸ್‌ ತಂಡದ ವೇಗದ ಬೌಲರ್‌ ಓಷೇನ್‌ ಥಾಮಸ್‌ ಹೇಳಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಪ್ರಕಟಿಸಲಾಗಿರುವ 25 ಮಂದಿಯಲ್ಲಿ ಓಷೇನ್‌ ಅವರು ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದಾರೆ. ಸೌತಾಂಪ್ಟನ್‌ ಹಾಗೂ ಮ್ಯಾಂಚೆಸ್ಟರ್‌ನಲ್ಲಿ ಉಭಯ ತಂಡಗಳು ಜೀವ ಸುರಕ್ಷಾ (ಬಯೊ ಸೆಕ್ಯೂರ್‌) ವಾತಾವರಣದಲ್ಲಿ ಪಂದ್ಯಗಳನ್ನು ಆಡಲಿವೆ.

‘ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಣಕ್ಕಿಳಿಯುವ ಆಸೆಯಿದೆ. ಎಲ್ಲ ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ಉತ್ತಮ ಸಾಮರ್ಥ್ಯ ತೋರಬೇಕೆಂಬ ಹಂಬಲವಿದೆ’ ಎಂದು ಜಮೈಕನ್‌ ಆಬ್ಸರ್ವರ್‌ ಸುದ್ದಿಸಂಸ್ಥೆಗೆ ಥಾಮಸ್‌ ತಿಳಿಸಿದ್ದಾರೆ. 

‘ಟೆಸ್ಟ್‌ ಕ್ರಿಕೆಟ್‌ ಆಡುವುದು ಪ್ರತಿಯೊಬ್ಬರ ಬಯಕೆಯಾಗಿರುತ್ತದೆ. ಮಹಾನ್‌ ಆಟಗಾರರಲ್ಲಿ ನಾನೂ ಒಬ್ಬನಾಗಬೇಕೆಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ’ ಎಂದು 23 ವರ್ಷದ ಥಾಮಸ್‌ ಹೇಳಿದ್ದಾರೆ.

ಥಾಮಸ್‌ ಇದುವರೆಗೆ ವೆಸ್ಟ್‌ ಇಂಡೀಸ್‌ ತಂಡವನ್ನು 20 ಏಕದಿನ ಮತ್ತು 12 ಟ್ವೆಂಟಿ–20 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು