ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ರ‍್ಯಾಂಕಿಂಗ್: ಜೇಸನ್ ಹೋಲ್ಡರ್‌ಗೆ ಬಡ್ತಿ

Last Updated 14 ಜುಲೈ 2020, 17:08 IST
ಅಕ್ಷರ ಗಾತ್ರ

ದುಬೈ: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ನಾಯಕ ಜೇಸನ್ ಹೋಲ್ಡರ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ ( ಐಸಿಸಿ) ರ‍್ಯಾಂಕಿಂಗ್‌ನ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದ್ದಾರೆ.

ಹೋದ 20 ವರ್ಷಗಳಲ್ಲಿ ಈ ಸಾಧನೆ ಮಾಡಿದ ವೆಸ್ಟ್‌ ಇಂಡೀಸ್‌ನ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ಇಂಗ್ಲೆಂಡ್ ತಂಡವ ವಿರುದ್ಧ ಸೌತಾಂಪ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಹೋಲ್ಡರ್ 42 ರನ್‌ಗಳಿಗೆ 6 ವಿಕೆಟ್‌ಗಳನ್ನು ಗಳಿಸಿದ್ದರು. ಅದರೊಂದಿಗೆ ಒಟ್ಟು 862 ಪಾಯಿಂಟ್ಸ್‌ ಗಳಿಸಿದರು. 2000 ನೇ ಇಸವಿಯ ಆಗಸ್ಟ್‌ನಲ್ಲಿ ಕರ್ಟ್ನಿ ವಾಲ್ಶ್‌ 866 ಅಂಕಗಳನ್ನು ಗಳಿಸಿದ್ದರು. ಅವರ ನಂತರ ಅತಿ ಹೆಚ್ಚು ಪಾಯಿಂಟ್ಸ್‌ ಸಾಧನೆ ಮಾಡಿದ ವಿಂಡೀಸ್ ಬೌಲರ್ ಆಗಿದ್ದಾರೆ. ಜೇಸನ್.

ಕೋವಿಡ್-19 ತಡೆಗೆ ಲಾಕ್‌ಡೌನ್‌ ವಿಧಿಸಿದ್ದರಿಂದಾಗಿ ಸುಮಾರು ನಾಲ್ಕು ತಿಂಗಳ ಕಾಲ ಕ್ರಿಕೆಟ್ ಪಂದ್ಯಗಳು ನಡೆದಿರಲಿಲ್ಲ. ಇಂಗ್ಲೆಂಡ್ ಮತ್ತು ವಿಂಡೀಸ್ ನಡುವೆ ಮೊದಲ ಟೆಸ್ಟ್ ನಡೆದಿತ್ತು. ಅದರಲ್ಲಿ ಜೇಸನ್ ಹೋಲ್ಡರ್ ಬಳಗ ಜಯಿಸಿತ್ತು. ಬ್ಯಾಟಿಂಗ್ ಪಟ್ಟಿಯಲ್ಲಿ ಹೋಲ್ಡರ್ 35ನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್ ವಿಭಾಗದಲ್ಲಿ ಹೋಲ್ಡರ್ ಅಗ್ರಸ್ಥಾನ ಗಳಿಸಿದ್ದಾರೆ. ಇದರಲ್ಲಿ ಬೆನ್ ಸ್ಟೋಕ್ಸ್‌ ಮತ್ತು ಭಾರತದ ರವೀಂದ್ರ ಜಡೇಜ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಆರ್. ಅಶ್ವಿನ್ ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇವೆರಡು ತಂಡಗಳನ್ನು ಬಿಟ್ಟರೆ, ಭಾರತವೂ ಸೇರಿದಂತೆ ವಿಶ್ವದ ಇನ್ನುಳಿದ ಯಾವುದೇ ಕ್ರಿಕೆಟ್ ತಂಡವೂ ಇದುವರೆಗೆ ಕಣಕ್ಕಿಳಿದಿಲ್ಲ. ಆದರೆ ಭಾರತದ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳು ಅಗ್ರ ಹತ್ತರಲ್ಲಿ ತಮ್ಮ ಸ್ಥಾನಗಳನ್ನು ಕಾಪಾಡಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ಅಗ್ರಸ್ಥಾನದಲ್ಲಿದ್ದಾರೆ. ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರು ಕ್ರಮವಾಗಿ ಏಳು ಹಾಗೂ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್‌ ಮೊದಲ ಮತ್ತು ಜಸ್‌ಪ್ರೀತ್ ಬೂಮ್ರಾ ಏಳನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT