ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

IND vs AUS: ಸ್ಪಿನ್‌ ಬೌಲಿಂಗ್: ಸಾಕಷ್ಟು ಆಯ್ಕೆಗಳಿವೆ - ಪ್ಯಾಟ್‌ ಕಮಿನ್ಸ್‌

ಕ್ರಿಕೆಟ್‌: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಹೇಳಿಕೆ
Last Updated 4 ಫೆಬ್ರುವರಿ 2023, 12:45 IST
ಅಕ್ಷರ ಗಾತ್ರ

ಬೆಂಗಳೂರು: ಸ್ಪಿನ್‌ ಬೌಲಿಂಗ್‌ಗೆ ನೆರವು ನೀಡುವ ಭಾರತದ ಪಿಚ್‌ಗಳಲ್ಲಿ ಪರಿಣಾಮಕಾರಿಯಾಗಬಲ್ಲ ಬೌಲರ್‌ಗಳು ನಮ್ಮ ತಂಡದಲ್ಲಿದ್ದಾರೆ ಎಂದು ಆಸ್ಟ್ರೇಲಿಯಾ ಟೆಸ್ಟ್‌ ಕ್ರಿಕೆಟ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಹೇಳಿದ್ದಾರೆ.

‘ಅನುಭವಿ ಸ್ಪಿನ್ನರ್‌ ನೇಥ‌ನ್‌ ಲಯನ್‌ ಅವರಿಗೆ ತಕ್ಕ ಸಾಥ್‌ ನೀಡಲು ಸಾಕಷ್ಟು ಆಯ್ಕೆಗಳು ಇವೆ’ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗಾವಸ್ಕರ್‌– ಬಾರ್ಡರ್‌ ಟ್ರೋಫಿ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವ ಆಸ್ಟ್ರೇಲಿಯಾದ ಆಟಗಾರರು ಕಳೆದ ಕೆಲ ದಿನಗಳಿಂದ ಆಲೂರಿನ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.

ನೇಥನ್‌ ಲಯನ್‌ ಅಲ್ಲದೆ, ಸ್ಪಿನ್ನರ್‌ಗಳಾದ ಆ್ಯಷ್ಟನ್ ಆಗರ್ ಮತ್ತು ಮಿಚೆಲ್ ಸ್ವಿಪ್ಸನ್ ಅವರಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ನೀಡಲಾಗಿದೆ.

‘ಎದುರಾಳಿ ತಂಡದ 20 ವಿಕೆಟ್‌ಗಳನ್ನು ಪಡೆಯುವ ಸಾಮರ್ಥ್ಯ ಹೊಂದಿರುವ ಬೌಲರ್‌ಗಳನ್ನು ಅಂತಿಮ ಇಲೆವೆನ್‌ನಲ್ಲಿ ಕಣಕ್ಕಿಳಿಸುತ್ತೇವೆ. ಎಷ್ಟು ಸಿನ್ನರ್‌ಗಳಿಗೆ ಅವಕಾಶ ನೀಡಬೇಕು ಎಂಬುದನ್ನು ಪಿಚ್‌ನ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧರಿಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT