ಬುಧವಾರ, ಜನವರಿ 20, 2021
17 °C

ಕೇಂದ್ರ ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿದ ಇಂಗ್ಲೆಂಡ್‌ ಮಾಜಿ‌ ಕ್ರಿಕೆಟಿಗ ಪನೇಸರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ಕೃಷಿ ಕಾಯ್ದೆಗಳನ್ನು ಇಂಗ್ಲೆಂಡ್‌ನ ಮಾಜಿ ಸ್ಪಿನ್ನರ್ ಮಾಂಟಿ ಪನೇಸರ್ ಪ್ರಶ್ನೆ ಮಾಡಿದ್ದಾರೆ.

'ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ಕಾಯ್ದೆ', 'ಬೆಲೆ ಖಾತರಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಮತ್ತು ರಕ್ಷಣೆ) ಕಾಯ್ದೆ' ಮತ್ತು 'ಕೃಷಿ ಸೇವೆಗಳು ಮತ್ತು ಅಗತ್ಯ ವಸ್ತು ತಿದ್ದುಪಡಿ ಕಾಯ್ದೆ'ಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಪಂಜಾಬ್, ಹರಿಯಾಣದ ರೈತರು ದೆಹಲಿ ಸಮೀಪದ ಸಿಂಗು ಬಾರ್ಡರ್‌ ಬಳಿ ಕಳೆದ ಐದು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಮಾಂಟಿ ಪನೇಸರ್‌ ಕೃಷಿ ಕಾನೂನುಗಳನ್ನು ಪ್ರಶ್ನಿಸಿ ಟ್ವೀಟ್‌ ಮಾಡಿದ್ದಾರೆ.

'ಒಪ್ಪಂದದ ಪ್ರಕಾರ ಕೃಷಿ ಉತ್ಪನ್ನಗಳ ಗುಣಮಟ್ಟ ಇಲ್ಲವೆಂಬ ಕಾರಣವನ್ನು ಮುಂದಿಟ್ಟು ಖರೀದಿದಾರನು ಒಪ್ಪಂದಕ್ಕೆ ಅನುಗುಣವಾಗಿ ನಡೆದುಕೊಳ್ಳದಿದ್ದರೆ ಏನಾಗಬಹುದು? ಹಾಗೇನಾದರೂ ಆದರೆ, ರೈತರಿಗೆ ಯಾವ ಭದ್ರತೆ ಸಿಗುತ್ತದೆ? ಬೆಲೆ ನಿಗದಿ ಬಗ್ಗೆ ಯಾವುದೇ ಉಲ್ಲೇಖವಿಲ್ಲ?' ಎಂದು ಪನೇಸರ್‌ ಟ್ವೀಟ್‌ ಮಾಡಿದ್ದಾರೆ.

ಈ ಟ್ವೀಟ್‌ ಅನ್ನು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್‌ ಮಾಡಿದ್ದಾರೆ ಪನೇಸರ್‌.

ಇದಿಷ್ಟೇ ಅಲ್ಲದೇ, ಅವರ 'ಮಾಂಟಿ ಚಾನೆಲ್‌' ಮೂಲಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು