ಮಂಗಳವಾರ, ಏಪ್ರಿಲ್ 20, 2021
32 °C

ಎರಡೇ ದಿನಗಳಲ್ಲಿ ಫಲಿತಾಂಶ ಟೆಸ್ಟ್ ಕ್ರಿಕೆಟ್‌ಗೆ ಉತ್ತಮವಲ್ಲ: ಯುವರಾಜ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Yuvraj Singh

ಅಹಮದಾಬಾದ್: ಇಂಗ್ಲೆಂಡ್–ಭಾರತ ತಂಡಗಳ ನಡುವಣ ಟೆಸ್ಟ್ ಪಂದ್ಯ ಎರಡೇ ದಿನಗಳಲ್ಲಿ ಫಲಿತಾಂಶ ಕಂಡಿರುವುದಕ್ಕೆ ಕೆಲವು ಹಿರಿಯ ಆಟಗಾರರಿಂದ ಪಿಚ್ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ.

ಎರಡೇ ದಿನಗಳಲ್ಲಿ ಫಲಿತಾಂಶ ಟೆಸ್ಟ್ ಕ್ರಿಕೆಟ್‌ಗೆ ಉತ್ತಮವಲ್ಲ ಎಂದು ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಪಂದ್ಯದ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಎರಡೇ ದಿನಗಳಲ್ಲಿ ಫಲಿತಾಂಶ ಬಂದಿರುವುದು ಟೆಸ್ಟ್ ಕ್ರಿಕೆಟ್‌ನ ದೃಷ್ಟಿಯಿಂದ ಒಳ್ಳೆಯದಲ್ಲ. ಇಂಥ ಪಿಚ್‌ನಲ್ಲಿ ಅನಿಲ್ ಕುಂಬ್ಳೆ ಅಥವಾ ಹರಭಜನ್ ಸಿಂಗ್ ಬೌಲಿಂಗ್ ಮಾಡಿದ್ದಿದ್ದರೆ ಅವರ ವಿಕೆಟ್ ಗಳಿಗೆ ಈಗ 1000 ಹಾಗೂ 800 ಆಗಿರುತ್ತಿತ್ತು ಎಂದು ಯೋಚಿಸುತ್ತಿದ್ದೇನೆ. ಆದಾಗ್ಯೂ ಉತ್ತಮ ಬೌಲಿಂಗ್ ಮಾಡಿದ ಅಕ್ಷರ್ ಪಟೇಲ್, ಅಶ್ವಿನ್ ಹಾಗೂ ಇಶಾಂತ್‌ಗೆ ಅಭಿನಂದನೆಗಳು’ ಎಂದು ಉಲ್ಲೇಖಿಸಿದ್ದಾರೆ.

ಓದಿ: 

ಮೊಟೇರಾ ಪಿಚ್‌ ಟೆಸ್ಟ್‌ ಕ್ರಿಕೆಟ್‌ಗೆ ಸೂಕ್ತವಲ್ಲ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮತ್ತು ಹರಭಜನ್ ಸಿಂಗ್ ಗುರುವಾರ ಅಭಿಪ್ರಾಯಪಟ್ಟಿದ್ದರು. ಆದರೆ, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾತ್ರ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಿಚ್‌ ಉತ್ತಮವಾಗಿಯೇ ಇದೆ. ಆದರೆ, ಬ್ಯಾಟ್ಸ್‌ಮನ್‌ಗಳು ಕೌಶಲಭರಿತ ಮತ್ತು ಉತ್ತಮ ದರ್ಜೆಯ ಆಟವಾಡಲಿಲ್ಲ ಎಂದು ಅವರು ಹೇಳಿದ್ದಾರೆ. ‘ಪಿಚ್ ಕುರಿತು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನಿರ್ಧರಿಸಬೇಕು. ಆಟಗಾರರಲ್ಲ’ ಎಂದು ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಕೂಡ ಹೇಳಿದ್ದಾರೆ.

ಓದಿ: 

ಗುರುವಾರ ಕೊನೆಗೊಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಪ್ರವಾಸಿ ಇಂಗ್ಲೆಂಡ್ ವಿರುದ್ದ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಸರಣಿಯಲ್ಲಿ 2-1ರ ಅಂತರದ ಮುನ್ನಡೆ ದಾಖಲಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು