ಭಾನುವಾರ, ಜೂನ್ 26, 2022
21 °C

IPL 2022| ಪ್ಲೇ ಆಫ್‌ನಲ್ಲಿ ಯಾರು ಯಾರನ್ನು ಎದುರಿಸಲಿದ್ದಾರೆ?

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶನಿವಾರ ರಾತ್ರಿ ನಡೆದ ಐಪಿಎಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ಸೋಲುಂಡಿತು. ಇದರೊಂದಿಗೆ ಐಪಿಎಲ್‌ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರ ನಾಲ್ಕು ಸ್ಥಾನಗಳಲ್ಲಿ ಉಳಿದವರು ಯಾರು ಎಂಬುದು ಖಚಿತವಾಗಿದೆ.

‌ಗುಜರಾತ್‌ ಟೈಟನ್ಸ್‌ ಮೊದಲ ಸ್ಥಾನದಲ್ಲಿದ್ದರೆ, ರಾಜಸ್ಥಾನ್‌ ರಾಯಲ್ಸ್‌, ಲಖನೌ ಸೂಪರ್‌ ಜೈಂಟ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ನಂತರದ ಸ್ಥಾನಗಳಲ್ಲಿವೆ. ಒಂದು ವೇಳೆ ಶನಿವಾರದ ಪಂದ್ಯದಲ್ಲಿ ಡೆಲ್ಲಿ ಗೆದ್ದಿದ್ದರೆ, ಅದು ರನ್‌ ರೇಟ್‌ ಆಧಾರದಲ್ಲಿ ಆರ್‌ಸಿಬಿಯನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರುತ್ತಿತ್ತು.

ಸದ್ಯದ ಪಾಯಿಂಟ್‌ ಪಟ್ಟಿಯಂತೆ, ಆಗ್ರ ಎರಡು ತಂಡಗಳಾದ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮಂಗಳವಾರ ಕ್ವಾಲಿಫೈಯರ್–1 ಅನ್ನು ಆಡಲಿವೆ. ಇದರಲ್ಲಿ ಗೆದ್ದವರು ಫೈನಲ್‌ ಪ್ರವೇಶಿಸಲಿದ್ದಾರೆ.

ಸೋತವರು ಲಖನೌ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಬುಧವಾರದ ಎಲಿಮಿನೇಟರ್‌ನಲ್ಲಿ ಗೆಲುವು ಸಾಧಿಸುವವರ ವಿರುದ್ಧ ಸೆಣಸಲಿದ್ದಾರೆ. ಇದರಲ್ಲಿ ಗೆದ್ದವರು ಫೈನಲ್‌ಗೆ ತಲುಪುತ್ತಾರೆ. ಸೋತವರು ಮೂರನೇ ಸ್ಥಾನ ಅಲಂಕರಿಸಲಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು