ಗುರುವಾರ , ಮಾರ್ಚ್ 23, 2023
21 °C

T20 WC 2022: ಬಾಂಗ್ಲಾ-ಅಫ್ಗನ್ ತೇರ್ಗಡೆ; ವಿಂಡೀಸ್-ಲಂಕಾಗೆ ಕಠಿಣ ಹಾದಿ

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ 2022 ಟೂರ್ನಿಗಾಗಿ ಬಾಂಗ್ಲಾದೇಶ ಹಾಗೂ ಅಫ್ಗಾನಿಸ್ತಾನ ತಂಡಗಳು ಸೂಪರ್-12 ಹಂತಕ್ಕೆ ನೇರ ಅರ್ಹತೆಯನ್ನು ಗಿಟ್ಟಿಸಿಕೊಂಡಿವೆ.

ಅದೇ ಹೊತ್ತಿಗೆ ಎರಡು ಬಾರಿಯ ಚಾಂಪಿಯನ್ ವೆಸ್ಟ್‌ಇಂಡೀಸ್ ಹಾಗೂ 2014ರ ಚಾಂಪಿಯನ್ ಶ್ರೀಲಂಕಾ, ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸಬೇಕಿದೆ.

ಇದನ್ನೂ ಓದಿ: 

ಪ್ರಸಕ್ತ ಸಾಗುತ್ತಿರುವ ವಿಶ್ವಕಪ್‌ನಲ್ಲಿ ವಿಜೇತ ಹಾಗೂ ರನ್ನರ್-ಅಪ್ ತಂಡಗಳು ಸೇರಿದಂತೆ ಶ್ರೇಯಾಂಕ ಪಟ್ಟಿಯಲ್ಲಿ ಬಳಿಕದ ಆರು ತಂಡಗಳು ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್‌ನ ಸೂಪರ್-12 ಹಂತಕ್ಕೆ ನೇರ ಅರ್ಹತೆಯನ್ನು ಪಡೆಯಲಿವೆ.

ಐಸಿಸಿ ತಾಜಾ ರ‍್ಯಾಂಕಿಂಗ್ ಪಟ್ಟಿ ಪ್ರಕಾರ ಇಂಗ್ಲೆಂಡ್, ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ತಮ್ಮ ಸ್ಥಾನಗಳನ್ನು ಖಚಿತಪಡಿಸಿಕೊಂಡಿವೆ.

ರ‍್ಯಾಂಕಿಂಗ್ ಆಧಾರದಲ್ಲಿ ತಂಡಗಳನ್ನು ನಿರ್ಧರಿಸುವ ಕೊನೆಯ ದಿನಾಂಕ ನವೆಂಬರ್ 15 ಆಗಿದೆ. ಅಲ್ಲದೆ ಶ್ರೇಯಾಂಕ ಪಟ್ಟಿಯಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುವ ಸಾಧ್ಯತೆಗಳಿಲ್ಲ. 

ಇನ್ನೊಂದೆಡೆ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸುವುದರೊಂದಿಗೆ ವೆಸ್ಟ್‌ಇಂಡೀಸ್ 10ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಅಲ್ಲದೆ ಶ್ರೀಲಂಕಾ ಒಂಬತ್ತನೇ ಸ್ಥಾನದಲ್ಲಿದೆ.

ಇದರ ಸ್ಪಷ್ಟ ಲಾಭ ಪಡೆದಿರುವ ಬಾಂಗ್ಲಾದೇಶ ಎಂಟನೇ ಸ್ಥಾನಕ್ಕೆ ನೆಗೆದಿದೆ. ಆ ಮೂಲಕ 2022ರ ವಿಶ್ವಕಪ್‌ಗಾಗಿ ತನ್ನ ಸ್ಥಾನವನ್ನು ಖಚಿತಪಡಿಸಿದೆ.

ಈ ಬಾರಿ ಸೂಪರ್-12 ಹಂತದಲ್ಲಿ ಸ್ಪರ್ಧಿಸಿರುವ ವೆಸ್ಟ್‌ಇಂಡೀಸ್, ಶ್ರೀಲಂಕಾ, ನಮೀಬಿಯಾ ಹಾಗೂ ಸ್ಕಾಟ್ಲೆಂಡ್ ತಂಡಗಳು 2022ರ ವಿಶ್ವಕಪ್‌ನಲ್ಲೂ ಸೂಪರ್-12 ಹಂತಕ್ಕೆ ಪ್ರವೇಶಿಸಲು ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸಬೇಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು