ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿರುಸಿನ ಶತಕ ಸಿಡಿಸಿ ಗ್ಯಾರಿ, ಕಪಿಲ್ ಸಾಲಿಗೆ ಸೇರಿದ ಬೆನ್ ಸ್ಟೋಕ್ಸ್

Last Updated 18 ಮಾರ್ಚ್ 2022, 10:26 IST
ಅಕ್ಷರ ಗಾತ್ರ

ಬಾರ್ಬಡೋಸ್ (ವೆಸ್ಟ್ ಇಂಡೀಸ್): ಇಂಗ್ಲೆಂಡ್‌ನ ಆಲ್‌ರೌಂಡರ್ ಆಟಗಾರ ಬೆನ್ ಸ್ಟೋಕ್ಸ್ ಇಲ್ಲಿನ ಬ್ರಿಡ್ಜ್‌ಟೌನ್ ಮೈದಾನದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಬಿರುಸಿನ ಶತಕ ಗಳಿಸುವ ಮೂಲಕ ವಿಶಿಷ್ಟ ದಾಖಲೆ ಬರೆದಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ 5,000 ರನ್ ಹಾಗೂ 100ಕ್ಕೂ ಹೆಚ್ಚು ವಿಕೆಟ್ ಗಳಿಸಿದ ವಿಶ್ವದ ಐದನೇ ಆಟಗಾರ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.

ಈ ಮೂಲಕ ದಿಗ್ಗಜರಾದ ಗ್ಯಾರಿ ಸೋಬರ್ಸ್, ಇಯಾನ್ ಬಾಥಮ್, ಕಪಿಲ್ ದೇವ್ ಹಾಗೂ ಜ್ಯಾಕ್ ಕಾಲಿಸ್ ಸಾಲಿಗೆ ಸೇರ್ಪಡೆಯಾಗಿದ್ದಾರೆ.

78 ಟೆಸ್ಟ್ ಪಂದ್ಯಗಳಲ್ಲಿ 5036 ರನ್ ಗಳಿಸಿರುವ ಸ್ಟೋಕ್ಸ್ 170 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

128 ಎಸೆತಗಳನ್ನು ಎದುರಿಸಿದ ಸ್ಟೋಕ್ಸ್ 11 ಬೌಂಡರಿ ಹಾಗೂ ಆರು ಸಿಕ್ಸರ್ ನೆರವಿನಿಂದ 120 ರನ್ ಗಳಿಸಿದರು. ಈ ಮೂಲಕ ಆಂಗ್ಲರ ಪಡೆ ಒಂಬತ್ತು ವಿಕೆಟ್ ನಷ್ಟಕ್ಕೆ 507 ರನ್ ಗಳಿಸಿ ಡಿಕ್ಲೇರ್ ಘೋಷಿಸಿತು.

ನಾಯಕ ಜೋ ರೂಟ್ (153) ಹಾಗೂ ಡೇನಿಯಲ್ ಲಾರೆನ್ಸ್ (91) ಆಕರ್ಷಕ ಇನ್ನಿಂಗ್ಸ್ ಕಟ್ಟುವ ಮೂಲಕ ಗಮನ ಸೆಳೆದರು.

ಬಳಿಕ ಉತ್ತರ ನೀಡಲಾರಂಭಿಸಿರುವ ವೆಸ್ಟ್ ಇಂಡೀಸ್ ಎರಡನೇ ದಿನದಂತ್ಯಕ್ಕೆ ಒಂದು ವಿಕೆಟ್ ನಷ್ಟಕ್ಕೆ 71 ರನ್ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT