ಬ್ರಿಸ್ಬೇನ್: ಆಲ್ರೌಂಡರ್ ವಿಲ್ ಜ್ಯಾಕ್ಸ್ ಅವರು ಆಸ್ಟ್ರೇಲಿಯಾ ವಿರುದ್ಧದ ಆ್ಯಷಸ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಪರ ಕಣಕ್ಕಿಳಿಯಲಿದ್ದಾರೆ. ಅವರು ಗಾಯಾಳು ಮಾರ್ಕ್ ವುಡ್ ಬದಲಿಗೆ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಜ್ಯಾಕ್ಸ್ ಅವರು 2022ರ ಡಿಸೆಂಬರ್ನಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಬಾರಿಗೆ ಟೆಸ್ಟ್ ಪಂದ್ಯ ಆಡಿದ್ದರು. ಆ ನಂತರ ಸೀಮಿತ ಓವರ್ಗಳ ಪಂದ್ಯಗಳಲ್ಲಷ್ಟೇ ಕಾಣಿಸಿಕೊಳ್ಳುತ್ತಿದ್ದರು.

ಮತ್ತೊಂದೆಡೆ, ಕಳೆದ ಪಂದ್ಯದಲ್ಲಿ ಬೆನ್ನುನೋವಿಗೆ ತುತ್ತಾಗಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಅವರು ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಹಗಲು–ರಾತ್ರಿ ಮಾದರಿಯ ಈ ಟೆಸ್ಟ್ ಪಂದ್ಯವು ಬ್ರಿಸ್ಬೇನ್ನಲ್ಲಿ ಗುರುವಾರ ಆರಂಭವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.