ಸಿಡ್ನಿ: ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರು ಭಾರತ ವಿರುದ್ಧದ ಬಾರ್ಡರ್– ಗಾವಸ್ಕರ್ ಕ್ರಿಕೆಟ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡುವುದು ಅನುಮಾನ.

‘ನಾನು ಮೊದಲ ಟೆಸ್ಟ್‌ಅನ್ನು ಕಳೆದುಕೊಳ್ಳುವ ಸಾಧ್ಯತೆಯೇ ಅಧಿಕ. ಈ ತಿಂಗಳ ಕೊನೆಯ ವೇಳೆಗೆ ಗಾಯದಿಂದ ಎಷ್ಟು ಚೇತರಿಸಿಕೊಳ್ಳುವೆ ಎಂಬುದನ್ನು ನೋಡಬೇಕು. ಎರಡನೇ ಟೆಸ್ಟ್ ವೇಳೆಗೆ ಆಯ್ಕೆಗೆ ಲಭ್ಯನಾಗುವ ವಿಶ್ವಾಸವಿದೆ’ ಎಂದು ಅವರು ಸೋಮವಾರ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ‘ಬಾಕ್ಸಿಂಗ್ ಡೇ’ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಸ್ಟಾರ್ಕ್ ಅವರ ಕೈಬೆರಳಿಗೆ ಗಾಯವಾಗಿತ್ತು. ಮೂರನೇ ಟೆಸ್ಟ್‌ನಲ್ಲಿ ಅವರು ಆಡಿರಲಿಲ್ಲ.

ಆಲ್‌ರೌಂಡರ್ ಕ್ಯಾಮರಾನ್ ಗ್ರೀನ್ ಅವರೂ ಮೊದಲ ಟೆಸ್ಟ್‌ಗೆ ಲಭ್ಯರಾಗುವ ಸಾಧ್ಯತೆ ಕಡಿಮೆ. ಹಾಗಾದಲ್ಲಿ ಆಸ್ಟ್ರೇಲಿಯಾ ತಂಡ ಫೆ.9 ರಂದು ನಾಗ್ಪುರದಲ್ಲಿ ಆರಂಭವಾಗುವ ಮೊದಲ ಟೆಸ್ಟ್‌ನಲ್ಲಿ ಇಬ್ಬರು ವೇಗಿಗಳ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.