ಸೋಮವಾರ, ಸೆಪ್ಟೆಂಬರ್ 20, 2021
21 °C

ಐಸಿಸಿ ರ‍್ಯಾಂಕಿಂಗ್: ಅಗ್ರಸ್ಥಾನಕ್ಕೆ ಕೇನ್ ವಿಲಿಯಮ್ಸನ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ವಿಜೇತ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಮಾರ್ನಸ್ ಲಾಬುಷೇನ್ ಮೂರನೇ ಸ್ಥಾನದಲ್ಲಿದ್ದಾರೆ.

ಸೌತಾಂಪ್ಟನ್‌ನಲ್ಲಿ ನಡೆದ ಭಾರತ ವಿರುದ್ಧದ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಕೇನ್ ವಿಲಿಯಮ್ಸನ್ ಎರಡೂ ಇನಿಂಗ್ಸ್‌ಗಳಲ್ಲಿ (49 ಮತ್ತು ಅಜೇಯ 52) ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು. ಐಸಿಸಿ ಪಟ್ಟಿಯಲ್ಲಿ ಹತ್ತು ಪಾಯಿಂಟ್‌ಗಳ ಅಂತರದಿಂದ ಆಸ್ಟ್ರೇಲಿಯಾದ ಸ್ಟೀವ್‌ ಸ್ಮಿತ್ ಅವರನ್ನು ಹಿಂದಿಕ್ಕಿದರು. ಎರಡು ವಾರಗಳ ಹಿಂದಷ್ಟೇ ಸ್ಮಿತ್ ಅವರು ಕೇನ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದರು.

ಭಾರತದ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಕ್ರಮವಾಗಿ ಆರು ಹಾಗೂ ಏಳನೇ ಸ್ಥಾನ ಪಡೆದುಕೊಂಡಿದ್ದಾರೆ. ಅಜಿಂಕ್ಯ ರಹಾನೆ ಮೂರು ಸ್ಥಾನಗಳ ಬಡ್ತಿ ಪಡೆದು 13ನೇ ಸ್ಥಾನಕ್ಕೇರಿದ್ದಾರೆ.

ಬೌಲರ್‌ಗಳಲ್ಲಿ ನ್ಯೂಜಿಲೆಂಡ್ ವೇಗದ ಬೌಲರ್ ಕೈಲ್ ಜೆಮಿಸನ್ 13ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಟ್ರೆಂಟ್ ಬೌಲ್ಟ್‌ 11ನೇ ಸ್ಥಾನ ಗಳಿಸಿದ್ದಾರೆ.

ಆಲ್‌ರೌಂಡರ್‌ಗಳ ವಿಭಾಗದಲ್ಲಿ ಭಾರತದ ರವೀಂದ್ರ ಜಡೇಜ ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಅಗ್ರಸ್ಥಾನಕ್ಕೆ ಮರಳಿದ್ದಾರೆ. ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್‌ ಅವರೊಂದಿಗೆ ಜಡೇಜ ಸ್ಥಾನ ಹಂಚಿಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಆರ್. ಅಶ್ವಿನ್ ಇದ್ದಾರೆ. ಹೋದ ವಾರವಷ್ಟೇ ಜಡೇಜ ಅಗ್ರಸ್ಥಾನಕ್ಕೇರಿದ್ದರು. 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು