ಬುಧವಾರ, ಜೂನ್ 29, 2022
26 °C

IPL 2022: ತವರಿಗೆ ತೆರಳಿದ ವಿಲಿಯಮ್ಸನ್; ಕೊನೆಯ ಪಂದ್ಯಕ್ಕೆ ಅಲಭ್ಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ತವರೂರಾದ ನ್ಯೂಜಿಲೆಂಡ್‌ಗೆ ಹಿಂತಿರುಗಿದ್ದಾರೆ.

ಇದರಿಂದಾಗಿ ಐಪಿಎಲ್ 2022 ಟೂರ್ನಿಯಲ್ಲಿ ಕೊನೆಯ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಮೇ 22ರಂದು ಹೈದರಾಬಾದ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸವಾಲನ್ನು ಎದುರಿಸಲಿದೆ.

ಮಂಗಳವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಹೈದರಾಬಾದ್ ಮೂರು ರನ್ ಅಂತರದ ರೋಚಕ ಗೆಲುವು ದಾಖಲಿಸಿತ್ತು.

ಈ ಮೂಲಕ ಪ್ಲೇ-ಆಫ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿದ್ದು, ಕೊನೆಯ ಪಂದ್ಯದಲ್ಲೂ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಆದರೂ ಹೈದರಾಬಾದ್ ಪ್ಲೇ-ಆಫ್ ಪ್ರವೇಶವು ಇತರೆ ಪಂದ್ಯಗಳ ಫಲಿತಾಂಶವನ್ನು ಅವಲಂಬಿಸಿರುತ್ತದೆ.

13 ಪಂದ್ಯಗಳಲ್ಲಿ ಆರು ಗೆಲುವು ದಾಖಲಿಸಿರುವ ಹೈದರಾಬಾದ್ ಒಟ್ಟು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಕೋಲ್ಕತ್ತ ಹಾಗೂ ಪಂಜಾಬ್ ಅಷ್ಟೇ ಅಂಕಗಳನ್ನು ಹೊಂದಿದ್ದು, ರನ್ ರೇಟ್ ಲೆಕ್ಕಾಚಾರದಲ್ಲಿ ಹೈದರಾಬಾದ್ ಹಿಂದೆ ಬಿದ್ದಿದೆ.

ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿರುವ ವಿಲಿಯಮ್ಸನ್, 13 ಪಂದ್ಯಗಳಲ್ಲಿ 216 ರನ್ ಗಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು