ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವ ತೊರೆದ ಕೇನ್ ವಿಲಿಯಮ್ಸನ್

Last Updated 15 ಡಿಸೆಂಬರ್ 2022, 5:41 IST
ಅಕ್ಷರ ಗಾತ್ರ

ಆಕ್‌ಲೆಂಡ್: ಚೊಚ್ಚಲ ಟೆಸ್ಟ್ ಚಾಂಪಿಯನ್‌ಷಿಪ್‌ ಗೆಲುವಿನಲ್ಲಿ ನ್ಯೂಜಿಲೆಂಡ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಕೇನ್ ವಿಲಿಯಮ್ಸನ್ ಟೆಸ್ಟ್ ತಂಡದ ನಾಯಕತ್ವವನ್ನು ತೊರೆದಿದ್ದಾರೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ತಿಳಿಸಿದೆ.

ಟಿಮ್ ಸೌಥಿ ಅವರನ್ನು ನ್ಯೂಜಿಲೆಂಡ್ ಟೆಸ್ಟ್ ತಂಡದ ನೂತನ ನಾಯಕರಾಗಿ ನೇಮಕ ಮಾಡಲಾಗಿದೆ.

2023ರ ಏಕದಿನ ವಿಶ್ವಕಪ್ ಮತ್ತು 2024ರ ಟಿ–20 ವಿಶ್ವಕಪ್ ಸೇರಿ ಸೀಮಿತ ಓವರ್‌ಗಳ ಮಾದರಿಯ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಕೇನ್ ಮುನ್ನಡೆಸಲಿದ್ದಾರೆ.

ಬ್ರೆಂಡನ್ ಮೆಕಲಮ್ ಅವರ ನಂತರ 2016ರಲ್ಲಿ ನಾಯಕತ್ವ ವಹಿಸಿಕೊಂಡಿದ್ದ ವಿಲಿಯಮ್ಸನ್, ‘ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವ ನಿರ್ವಹಿಸಿದ್ದು, ಅತ್ಯಂತ ಗೌರವದ ಸಂಗತಿಯಾಗಿದೆ’ ಎಂದು ಹೇಳಿದ್ದಾರೆ

‘ನನಗೆ ಟೆಸ್ಟ್ ಕ್ರಿಕೆಟ್ ಎಂಬುದು ಅತ್ಯುನ್ನತ ಕ್ರಿಕೆಟ್ ಮಾದರಿಯಾಗಿದೆ. ಈ ಮಾದರಿಯಲ್ಲಿ ತಂಡವನ್ನು ಮುನ್ನಡೆಸುವಾಗ ಎದುರಾದ ಸವಾಲುಗಳನ್ನು ನಾನು ಆನಂದಿಸಿದ್ದೇನೆ’ಎಂದು ಕೇನ್ ಹೇಳಿದ್ದಾರೆ.

ಅಂಕಿಅಂಶಗಳ ಪ್ರಕಾರ, ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್‌ ಇತಿಹಾಸದಲ್ಲಿ ಕೇನ್ ವಿಲಿಯಮ್ಸನ್ ಅತ್ಯುತ್ತಮ ನಾಯಕರಾಗಿದ್ದಾರೆ. ಅವರ ನಾಯಕತ್ವದಲ್ಲಿ ಆಡಿದ 40 ಟೆಸ್ಟ್ಪಂದ್ಯಗಳ ಪೈಕಿ 22ರಲ್ಲಿ ಗೆಲುವು ಸಿಕ್ಕಿದೆ. 8 ಪಂದ್ಯ ಡ್ರಾ ಆಗಿದ್ದು, 10 ಪಂದ್ಯಗಳಲ್ಲಿ ಮಾತ್ರ ಸೋಲಾಗಿದೆ.

ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್ ಗೆಲುವಿಗೂ ಮುನ್ನ ಕೇನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ತಂಡ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನಕ್ಕೆ ತಲುಪಿತ್ತು.

ಅತ್ಯಧಿಕ ಕೆಲಸದ ಒತ್ತಡದಿಂದಾಗಿ ನಾಯಕತ್ವ ತೊರೆಯುತ್ತಿದ್ದೇನೆ. ಅದಕ್ಕೆ ಇದು ಸೂಕ್ತ ಸಮಯವಾಗಿದೆ ಎಂದು ನಾನು ಭಾವಿಸುತ್ತೇನೆ. ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಚರ್ಚಿಸಿದ ಬಳಿಕ ಎರಡು ವಿಶ್ವಕಪ್ ದೃಷ್ಟಿಯಿಂದ ಸೀಮಿತ ಓವರ್‌ಗಳ ತಂಡದ ನಾಯಕನಾಗಿ ಮುಂದುವರಿಯಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT