ನವದೆಹಲಿ: ಪ್ಯಾಡಿ ಆಪ್ಟನ್ ಅವರನ್ನು ಭಾರತ ಕ್ರಿಕೆಟ್ ತಂಡದ ಮೆಂಟಲ್ ಕಂಡಿಷನಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ.
2011ರಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್ ಜಯಿಸಿದ್ದ ಭಾರತ ತಂಡಕ್ಕೆ ಪ್ಯಾಡಿ ನೆರವು ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ್ದರು. ಈ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದ್ದು, ಅದಕ್ಕಾಗಿ ಭಾರತ ತಂಡದ ಆಟಗಾರರಿಗೆ ಮನೋದಾರ್ಢ್ಯ ನಿರ್ವಹಣೆ ತರಬೇತಿಯನ್ನು ಪ್ಯಾಡಿ ವಹಿಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.