ಭಾನುವಾರ, ಮಾರ್ಚ್ 29, 2020
19 °C

ಮಹಿಳಾ ಕ್ರಿಕೆಟ್‌: ಕರ್ನಾಟಕ ಜಯಭೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಮಹಿಳೆಯರು ಬಿಸಿಸಿಐ 19 ವರ್ಷದೊಳಗಿನವರ ಏಕದಿನ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಪಂದ್ಯದಲ್ಲಿ ವಿದರ್ಭ ತಂಡವನ್ನು ಆರು ವಿಕೆಟ್‌ಗಳಿಂದ ಮಣಿಸಿದರು.

ರಾಜಕೋಟ್‌ನ ಸೌರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ವಿದರ್ಭ, 37.4 ಓವರ್‌ಗಳಲ್ಲಿ ಎಲ್ಲ ವಿಕೆಟ್‌ ಕಳೆದುಕೊಂಡು ಕೇವಲ 72 ರನ್‌ ಗಳಿಸಿತು. ಕರ್ನಾಟಕ ತಂಡ, ಕೃಷಿಕಾ ರೆಡ್ಡಿ (24) ಬ್ಯಾಟಿಂಗ್‌ ಬಲದಿಂದ 21.1 ಓವರ್‌ಗಳಲ್ಲಿ ಜಯದಗೆರೆ ಮುಟ್ಟಿತು.

ಸಂಕ್ಷಿಪ್ತ ಸ್ಕೋರ್‌: ವಿದರ್ಭ: 37.4 ಓವರ್‌ಗಳಲ್ಲಿ 72 ಆಲೌಟ್ (ಆಯುಷಿ ಠಾಕ್ರೆ 25; ಅನಘಾ ಎಂ. 15ಕ್ಕೆ 2, ಅದಿತಿ ರಾಜೇಶ್‌ 6ಕ್ಕೆ 2, ಪೂಜಾ ಕುಮಾರಿ 9ಕ್ಕೆ 2) ಕರ್ನಾಟಕ: 21.1 ಓವರ್‌ಗಳಲ್ಲಿ 4 ವಿಕೆಟ್‌ಗೆ 77 (ಕೃಷಿಕಾ ರೆಡ್ಡಿ 24; ರಶ್ಮಿ ಸಿಂಗ್‌ 17ಕ್ಕೆ 2).

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು