ಬೆನೊನಿ, ದಕ್ಷಿಣ ಆಫ್ರಿಕಾ: 19 ವರ್ಷದೊಳಗಿನ ಮಹಿಳೆಯರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡವು ಸೋಮವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಂಡವನ್ನು ಎದುರಿಸಲಿದೆ.

ಇಲ್ಲಿಯ ವಿಲ್ಲೊಮೂರ್ ಪಾರ್ಕ್ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವಣ ಹಣಾಹಣಿಗೆ ವೇದಿಕೆ ಸಜ್ಜುಗೊಂಡಿದೆ.

ಶಫಾಲಿ ವರ್ಮಾ ನಾಯಕತ್ವದ ತಂಡವು ಟೂರ್ನಿಯಲ್ಲಿ ಜಯದ ಆರಂಭ ಮಾಡಿತ್ತು. ಶನಿವಾರ ನಡೆದ ಡಿ ಗುಂಪಿನ ಪಂದ್ಯದಲ್ಲಿ ಏಳು ವಿಕೆಟ್ಗಳಿಂದ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋಲುಣಿಸಿತ್ತು.ಶಫಾಲಿ ಆಲ್ರೌಂಡ್ ಆಟದ ಮೂಲಕ ಮಿಂಚಿದ್ದರು. ಶ್ವೇತಾ ಶೆರಾವತ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದರು. ಅದೇ ಲಯವನ್ನು ಮುಂದುವರಿಸುವ ತವಕದಲ್ಲಿ ತಂಡವಿದೆ. ಯುಎಇ ಕೂಡ ಬಲಿಷ್ಠ ಭಾರತ ತಂಡವನ್ನು ಮಣಿಸುವ ವಿಶ್ವಾಸದಲ್ಲಿದೆ.

ಪಂದ್ಯ ಆರಂಭ: ಮಧ್ಯಾಹ್ನ 1.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.