ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಣಿ ಕೈವಶದತ್ತ ಹರ್ಮನ್‌ ಪಡೆ ಚಿತ್ತ

ಮಹಿಳಾ ಕ್ರಿಕೆಟ್: ಆಸ್ಟ್ರೇಲಿಯಾ–ಭಾರತ ಹಣಾಹಣಿ ಇಂದು
Published 7 ಜನವರಿ 2024, 0:08 IST
Last Updated 7 ಜನವರಿ 2024, 0:08 IST
ಅಕ್ಷರ ಗಾತ್ರ

ನವೀ ಮುಂಬೈ: ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು  ಆಸ್ಟ್ರೇಲಿಯಾ ಎದುರಿನ ಟಿ20 ಸರಣಿಯನ್ನು ಕೈವಶ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ.

ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದಿದ್ದ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದರುವ ಆತಿಥೇಯ ತಂಡವು ಈಗ ಭರ್ತಿ ಆತ್ಮವಿಶ್ವಾಸದಲ್ಲಿದೆ. ಆದ್ದರಿಂದ ಭಾನುವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಗೆಲ್ಲುವ ಛಲದಲ್ಲಿದೆ.

ಏಕದಿನ ಸರಣಿಯಲ್ಲಿ ಸೋತಿದ್ದ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್ ಬಳಗ ತುದಿಗಾಲಿನಲ್ಲಿ ನಿಂತಿದೆ. 

ಮೊದಲ ಟಿ20 ಪಂದ್ಯದಲ್ಲಿ ಯುವ ಆಟಗಾರ್ತಿ ತಿತಾಸ್ ಸಾಧು ಅವರ ಅಮೋಘ ಬೌಲಿಂಗ್‌ನಿಂದಾಗಿ  ಭಾರತಕ್ಕೆ ಜಯ ಒಲಿದಿತ್ತು. ಶ್ರೇಯಾಂಕಾ ಪಾಟೀಲ, ದೀಪ್ತಿ ಶರ್ಮಾ ಹಾಗೂ ಪೂಜಾ ವಸ್ತ್ರಾಕರ್ ಅವರೂ ಪರಿಣಾಮಕಾರಿ ಬೌಲಿಂಗ್ ಮಾಡಿದ್ದರು. ಆ ಪಂದ್ಯದಲ್ಲಿ ಬ್ಯಾಟರ್‌ಗಳಾದ ಸ್ಮೃತಿ ಮಂದಾನ ಮತ್ತು ಶಫಾಲಿ ವರ್ಮಾ ಅವರು ಅರ್ಧಶತಕ ಗಳಿಸಿದ್ದರು. ಅದೇ ಲಯವನ್ನು ಮುಂದುವರಿಸಿದರೆ ಆಸ್ಟ್ರೇಲಿಯಾ ಎದುರು ಜಯಿಸುವುದು ಸರಳವಾಗಲಿದೆ.

ಆದರೆ ಆರು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಿರುಗೇಟು ನೀಡಲು ಕಾದಿದೆ. ಅಲಿಸಾ ಹೀಲಿ ನಾಯಕತ್ವದ ತಂಡದಲ್ಲಿ ಅನುಭವಿ ಆಟಗಾರ್ತಿಯರು ಇದ್ದಾರೆ. ಅವರು ಕೂಡ ಕಠಿಣ ಪೈಪೋಟಿಯೊಡ್ಡುವ ಛಲದಲ್ಲಿದ್ದಾರೆ.

ಪಂದ್ಯ ಆರಂಭ: ರಾತ್ರಿ 7ರಿಂದ

ನೇರಪ್ರಸಾರ: ಸ್ಪೋರ್ಟ್ಸ್ 18, ಜಿಯೊ ಸಿನಿಮಾ ಆ್ಯಪ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT