ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ20 ಕ್ರಿಕೆಟ್: ಮಂದಾನ ಬ್ಯಾಟಿಂಗ್‌ಗೆ ಒಲಿದ ಜಯ

ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಸೋಲುಣಿಸಿದ ಭಾರತ
Last Updated 14 ಸೆಪ್ಟೆಂಬರ್ 2022, 13:00 IST
ಅಕ್ಷರ ಗಾತ್ರ

ಡರ್ಬಿ: ಆರಂಭಿಕ ಬ್ಯಾಟರ್ ಸ್ಮೃತಿ ಮಂದಾನ ಗಳಿಸಿದ ಅಬ್ಬರದ ಅರ್ಧಶತಕದ ಬಲದಿಂದ ಭಾರತ ತಂಡವು ಇಂಗ್ಲೆಂಡ್ ಎದುರಿನ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಜಯಿಸಿತು.

ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 1–1ರ ಸಮಬಲ ಸಾಧಿಸಿತು.

ಮಂಗಳವಾರ ತಡರಾತ್ರಿ ನಡೆದ ಪಂದ್ಯದಲ್ಲಿ ಭಾರತ ತಂಡವು ಎಂಟು ವಿಕೆಟ್‌ಗಳ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಸ್ನೇಹಾ ರಾಣಾ (24ಕ್ಕೆ3) ದಾಳಿಯ ಮುಂದೆ 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 142 ರನ್‌ಗಳ ಸಾಧಾರಣ ಮೊತ್ತ ಗಳಿಸಿತು.

ಗುರಿ ಬೆನ್ನಟ್ಟಿದ್ದ ಭಾರತ ತಂಡವು ಇನಿಂಗ್ಸ್‌ನಲ್ಲಿ ಇನ್ನೂ 20 ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್‌ಗಳನ್ನು ಕಳೆದುಕೊಂಡು146 ರನ್‌ ಗಳಿಸಿತು. ಸ್ಮೃತಿ (ಔಟಾಗದೆ 79; 53; 4X13) ಹಾಗೂ ಶಫಾಲಿ ವರ್ಮಾ (20; 17ಎ, 4X4) ಮೊದಲ ವಿಕೆಟ್ ಜೊತೆಯಾಟದಲ್ಲಿ 55 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ಸ್ಮೃತಿ ಆಕರ್ಷಕವಾದ ಬ್ಯಾಟಿಂಗ್ ಮಾಡಿದರು. ಎದುರಾಳಿ ಬೌಲರ್‌ಗಳು ಅವರ ಚೆಂದದ ಡ್ರೈವ್‌ಗಳ ಮುಂದೆ ನಿರುತ್ತರರಾದರು.

ಶಫಾಲಿ ಹಾಗೂ ಹೇಮಲತಾ (9 ರನ್) ಔಟಾದ ನಂತರ ಸ್ಮೃತಿ ಜೊತೆ ಸೇರಿದ ನಾಯಕಿ ಹರ್ಮನ್‌ಪ್ರೀತ್ ಕೌರ್ (ಔಟಾಗದೆ 29; 22ಎ, 4X4) ತಂಡವನ್ನು ಗೆಲುವಿನ ದಡ ಸೇರಿಸಿದರು.

ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯವು ಗುರುವಾರ ಬ್ರಿಸ್ಟಲ್‌ನಲ್ಲಿ ನಡೆಯಲಿದೆ.

ಸಂಕ್ಷಿಪ್ತ ಸ್ಕೋರು:

ಇಂಗ್ಲೆಂಡ್: 20 ಓವರ್‌ಗಳಲ್ಲಿ 6ಕ್ಕೆ 142 (ಫ್ರೆಯಾ ಕೆಂಪ್ ಔಟಾಗದೆ 51, ಮೈಯಾ ಬೌಷೇರ್ 34, ಸ್ನೇಹಾ ರಾಣಾ 24ಕ್ಕೆ3) ಭಾರತ: 16.4 ಓವರ್‌ಗಳಲ್ಲಿ 2 ವಿಕೆಟ್‌ಗಳಿಗೆ 146 (ಸ್ಮೃತಿ ಮಮದಾನಾ ಔಟಾಗದೆ 79, ಹರ್ಮನ್‌ಪ್ರೀತ್ ಕೌರ್ ಔಟಾಗದೆ 29, ಸೋಫಿ ಎಕ್ಸೆಲ್‌ಸ್ಟೋನ್ 22ಕ್ಕೆ1) ಫಲಿತಾಂಶ: ಭಾರತಕ್ಕೆ 8 ವಿಕೆಟ್‌ಗಳಿಂದ ಜಯ. ಸರಣಿಯಲ್ಲಿ 1–1

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT