ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್‌ ಎದುರಿನ ಏಕದಿನ ಸರಣಿಗೆ ಹರ್ಮನ್‌ಪ್ರೀತ್‌ ಅಲಭ್ಯ

Last Updated 20 ಫೆಬ್ರುವರಿ 2019, 20:01 IST
ಅಕ್ಷರ ಗಾತ್ರ

ಮುಂಬೈ: ಭಾರತ ಮಹಿಳಾ ತಂಡದ ಆಟಗಾರ್ತಿ ಹರ್ಮನ್‌ಪ್ರೀತ್‌ ಕೌರ್‌ ಅವರು ಗಾಯಗೊಂಡಿದ್ದು, ಇಂಗ್ಲೆಂಡ್‌ ಎದುರಿನ ಸರಣಿಗೆ ಅಲಭ್ಯರಾಗಿದ್ದಾರೆ.

ಫೆಬ್ರುವರಿ 22ರಿಂದ ಮುಂಬೈನಲ್ಲಿ ಮೂರು ಏಕದಿನ ಪಂದ್ಯಗಳು ನಡೆಯಲಿವೆ. ಮೂರು ಟ್ವೆಂಟಿ–20 ಸರಣಿಯು ಮಾರ್ಚ್‌ 4 ರಿಂದ ಗುವಾಹಟಿಯಲ್ಲಿ ನಡೆಯಲಿದೆ. ಅವರ ಪಟಿಯಾಲದಲ್ಲಿ ನಡೆದಿದ್ದ ಅಭ್ಯಾಸ ಪಂದ್ಯದಲ್ಲಿ ಹರ್ಮನ್‌ ಪಾದಕ್ಕೆ ಪೆಟ್ಟಾಗಿದೆ. ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ವಿಶ್ರಾಂತಿ ಮತ್ತು ಆರೈಕೆ ಪಡೆಯಲಿದ್ದಾರೆ.

ಇಂಗ್ಲೆಂಡ್‌ ಎದುರಿನ ಅಭ್ಯಾಸ ಪಂದ್ಯದಲ್ಲಿ ಆಡಿದ ಮಧ್ಯಮ ಕ್ರಮಾಂಕದ ಆಟಗಾರ್ತಿ ರಾಖಿ ಹರ್ಲೀನ್‌ ಡಿಯೊಲ್‌, ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT