ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WPL 2024 | ಮುಂಬೈ ಗೆಲುವಿಗೆ 191 ರನ್ ಗುರಿ ಒಡ್ಡಿದ ಗುಜರಾತ್

Published 9 ಮಾರ್ಚ್ 2024, 16:03 IST
Last Updated 9 ಮಾರ್ಚ್ 2024, 16:03 IST
ಅಕ್ಷರ ಗಾತ್ರ

ದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವಿಗೆ 191 ರನ್ ಬೇಕಿದೆ.

ಶನಿವಾರ ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 190 ರನ್ ಪೇರಿಸಿತು.

ಗುಜರಾತ್ ಪರ ನಾಯಕಿ ಬೆತ್ ಮೂನಿ (66) ಹಾಗೂ ದಯಾಲನ್ ಹೇಮಲತಾ (74) ಬಿರುಸಿನ ಅರ್ಧಶತಕ ಗಳಿಸಿದರು. ಈ ಜೋಡಿ ದ್ವಿತೀಯ ವಿಕೆಟ್‌ಗೆ 121 ರನ್ ಪೇರಿಸಿತು.

ಮೂನಿ 35 ಎಸೆತಗಳಲ್ಲಿ 66 (8 ಬೌಂಡರಿ, 3 ಸಿಕ್ಸರ್) ಹಾಗೂ ಹೇಮಲತಾ 40 ಎಸೆತಗಳಲ್ಲಿ 74 ರನ್ (9 ಬೌಂಡರಿ, 2 ಸಿಕ್ಸರ್) ಗಳಿಸಿ ಮಿಂಚಿದರು.

ಕೆಳ ಕ್ರಮಾಂಕದಲ್ಲಿ ಭಾರತಿ ಫುಲ್‌ಮಲಿ ಅಜೇಯ 21 ರನ್ ಗಳಿಸಿದರು. ಮುಂಬೈ ಪರ ಸೈಕಾ ಇಶಾಖ್ ಎರಡು ವಿಕೆಟ್ ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT