ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WPL: ಡೆಲ್ಲಿ ನೀಡಿದ 193 ರನ್ ಗುರಿ ಬೆನ್ನತ್ತಿರುವ ಮುಂಬೈಗೆ ಆರಂಭಿಕ ಆಘಾತ

Published 5 ಮಾರ್ಚ್ 2024, 16:29 IST
Last Updated 5 ಮಾರ್ಚ್ 2024, 16:29 IST
ಅಕ್ಷರ ಗಾತ್ರ

ನವದೆಹಲಿ: ಮಹಿಳೆಯರ ಪ್ರೀಮಿಯರ್ ಲೀಗ್‌ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 192 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿದೆ.

ನಾಯಕಿ ಮೆಗ್ ಲ್ಯಾನಿಂಗ್(53) ಮತ್ತು ಜೆಮಿಮಾ ರಾಡ್ರಿಗಾಸ್(69) ಅವರ ಅರ್ಧಶತಕಗಳ ನೆರವಿನಿಂದ ಡೆಲ್ಲಿ ತಂಡ 20 ಓವರ್‌ಗಳ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 192 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಶಫಾಲಿ ವರ್ಮಾ 28, ಅಲಿಸ್ ಕ್ಯಾಪ್ಸಿ 19 ರನ್ ಸಿಡಿಸಿ ತಂಡಕ್ಕೆ ನೆರವಾದರು.

ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದರೆ, ಮುಂಬೈ ತಂಡ ಎರಡನೇ ಸ್ಥಾನದಲ್ಲಿದೆ. ಮುಂಬೈ ಈ ಪಂದ್ಯ ಗೆದ್ದರೆ 8 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಲಿದೆ. ಸದ್ಯ ಎರಡೂ ತಂಡಗಳ ಅಂಕ 6 ಇದ್ದು, ರನ್ ರೇಟ್ ಆಧಾರದ ಮೇಲೆ ಡೆಲ್ಲಿ ಮೊದಲ ಸ್ಥಾನದಲ್ಲಿದೆ.

ಇತ್ತೀಚಿನ ವರದಿ ಪ್ರಕಾರ, 7.3 ಓವರ್‌ಗೆ ಮುಂಬೈ ತಂಡ 4 ವಿಕೆಟ್ ಕಳೆದುಕೊಂಡು 57 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT