ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Commonwealth Games ಟಿ20: ಆಸಿಸ್ ಮಹಿಳಾ ತಂಡಕ್ಕೆ ಸವಾಲಿನ ಗುರಿ ನೀಡಿದ ಭಾರತ

ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಮ್‌:ಕಾಮನ್‌ವೆಲ್ತ್ ಕ್ರೀಡಾಕೂಟದ ಮೊದಲ ಟಿ20ಕ್ರಿಕೆಟ್‌ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡ ಆಸ್ಟ್ರೇಲಿಯಾ ಪಡೆಗೆ 155 ರನ್‌ಗಳ ಗುರಿ ನೀಡಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಭಾರತದ ಇನಿಂಗ್ಸ್‌ಗೆ ಆರಂಭಿಕ ಬ್ಯಾಟರ್‌ ಶೆಫಾಲಿ ವರ್ಮಾ ಹಾಗೂ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಬಲ ತುಂಬಿದರು. ಇವರಿಬ್ಬರನ್ನು ಹೊರತುಪಡಿಸಿ, ಉಳಿದವರಿಂದ ನಿರೀಕ್ಷಿತ ಆಟ ಮೂಡಿಬರಲಿಲ್ಲ.

ಶೆಫಾಲಿ ಜೊತೆ ಇನಿಂಗ್ಸ್‌ ಆರಂಭಿಸಿದಎಡಗೈ ಬ್ಯಾಟರ್‌ ಸ್ಮೃತಿ ಮಂದಾನ (24 ರನ್) ತಂಡದ ಮೊತ್ತ 25 ರನ್‌ ಆಗಿದ್ದಾಗ ವಿಕೆಟ್‌ ಒಪ್ಪಿಸಿದರು. ಬಳಿಕ ಬಂದ ಯಷ್ಟಿಕಾ ಭಾಟಿಯಾ (8) ಹೆಚ್ಚು ಹೊತ್ತು ನಿಲ್ಲಲಿಲ್ಲ. ಇದರ ಬೆನ್ನಲ್ಲೇ,ಕೇವಲ 33 ಎಸೆತಗಳಲ್ಲಿ 9 ಬೌಂಡರಿ ಸಹಿತ 48 ರನ್‌ ಗಳಿಸಿದ್ದ ಶೆಫಾಲಿ ಕೂಡ ಪೆವಿಲಿಯನ್‌ ಸೇರಿಕೊಂಡರು.

ಜೆಮಿಯಾ ರಾಡ್ರಿಗಸ್‌ (11) ಹಾಗೂ ದೀಪ್ತಿ ಶರ್ಮಾ (1) ವೈಫಲ್ಯ ಅನುಭವಿಸಿದರು.

ಒಂದೆಡೆ ವಿಕೆಟ್‌ ಉರುಳುತ್ತಿದ್ದರೂ ದಿಟ್ಟ ಆಟವಾಡಿದ ನಾಯಕಿ ಕೌರ್‌, ತಂಡಕ್ಕೆ ಆಧಾರವಾದರು. ಅವರು ಕೇವಲ 34 ಎಸೆತಗಳಲ್ಲಿ 52 ರನ್‌ ಗಳಿಸಿ ಮಿಂಚಿದರು. ಹೀಗಾಗಿಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 154 ರನ್‌ ಕಲೆಹಾಕಿದೆ.

ಆಸಿಸ್‌ ಪರ ಜೆಸ್‌ ಜೊನಾಸನ್‌ ನಾಲ್ಕು ವಿಕೆಟ್‌ ಕಬಳಿಸಿದರೆ, ಮೇಘನ್‌ ಸ್ಕಟ್‌ 2 ಹಾಗೂಡಾರ್ಸಿ ಬ್ರೌನ್‌ ಒಂದು ವಿಕೆಟ್ ಪಡೆದರು.

24 ವರ್ಷಗಳ ಬಳಿಕ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಕ್ರಿಕೆಟ್‌ ಮರುಸೇರ್ಪೆಯಾಗಿದೆ. ಹೀಗಾಗಿಉಭಯ ತಂಡಗಳೂ ಟೂರ್ನಿಯಲ್ಲಿ ಶುಭಾರಂಭ ಮಾಡುವ ತವಕದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT