ನವಿ ಮುಂಬೈ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ಬಾರಿ ಟಾಸ್ ಸೋತ ಎರಡನೇ ತಂಡ ಎನ್ನುವ ಕುಖ್ಯಾತಿಯು ಭಾರತ ಮಹಿಳಾ ತಂಡದ್ದಾಗಿದೆ. ಈ ಬಾರಿಯ ವಿಶ್ವಕಪ್ನಲ್ಲಿ ಆಡಿರುವ ಒಂಬತ್ತು ಪಂದ್ಯಗಳಲ್ಲಿ 8 ಪಂದ್ಯದಲ್ಲಿ ಭಾರತವು ಟಾಸ್ ಸೋತಿದೆ. ಈ ಬಾರಿಯ ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾ ತಂಡವು ಕೂಡ 9 ಪಂದ್ಯದಲ್ಲಿ 7ರಲ್ಲಿ ಟಾಸ್ ಸೋತಿದೆ.

1982ರ ವಿಶ್ವಕಪ್ನಲ್ಲಿ ಆಡಿದ 13 ಪಂದ್ಯಗಳಲ್ಲಿ 9 ಬಾರಿ ಟಾಸ್ ಸೋತಿದ್ದ ಇಂಗ್ಲೆಂಡ್ ತಂಡವು ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ಟಾಸ್ ಸೋತ ತಂಡಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅದೇ ವಿಶ್ವಕಪ್ನಲ್ಲಿ ಆಡಿದ 12 ಪಂದ್ಯಗಳಲ್ಲಿ 8 ಬಾರಿ ಟಾಸ್ ಸೋತಿದ್ದ ಭಾರತವು ಮೂರನೇ ಸ್ಥಾನದಲ್ಲಿದೆ.

ವಿಶ್ವಕಪ್ – 2000 ಟೂರ್ನಿಯಲ್ಲಿ ಆಡಿದ 7 ಪಂದ್ಯದಲ್ಲಿ 7ರಲ್ಲೂ ಶ್ರೀಲಂಕಾ ತಂಡವು ಟಾಸ್ ಗೆಲ್ಲುವಲ್ಲಿ ವಿಫಲವಾಗಿತ್ತು.

ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರು ಕಳೆದ 11 ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಬಾರಿ ಮಾತ್ರ ಟಾಸ್ ಗೆದಿದ್ದಾರೆ. ವಿಶ್ವಕಪ್ನ ಕೊನೆಯ ಲೀಗ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಕೌರ್ ಟಾಸ್ ಗೆದ್ದಿದ್ದರು. ಆದರೆ, ಆ ಪಂದ್ಯವು ಮಳೆಯಿಂದ ರದ್ದುಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.