ಮಂಗಳವಾರ, ಜನವರಿ 31, 2023
18 °C

ಬೂಮ್ರಾ ಫಿಟ್: ದ್ರಾವಿಡ್ ನಿರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುವಾಹಟಿ (ಪಿಟಿಐ): ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಮುಂದಿನ ತಿಂಗಳು ಟಿ20 ವಿಶ್ವಕಪ್ ಟೂರ್ನಿಯ ವೇಳೆಗೆ ‘ಫಿಟ್‌’ ಆಗಬಹುದು  ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭರವಸೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ಸದ್ಯ ಅವರು ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಬಿದ್ದಿದ್ದಾರೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವು ದಿನಗಳ ವರೆಗೆ ಕಾದು ನೋಡಬೇಕಿದೆ. ಅವರ ಫಿಟ್‌ನೆಸ್ ಕುರಿತು ಅಧಿಕೃತ ಮಾಹಿತಿ ಬಂದ ಮೇಲಷ್ಟೇ ವಿಶ್ವಕಪ್ ಟೂರ್ನಿಗೆ ಅವರ ಲಭ್ಯತೆ ಬಗ್ಗೆ ಹೇಳಲು ಸಾಧ್ಯ’ ಎಂದರು. 

‘ಬೂಮ್ರಾ ಅವರ ವೈದ್ಯಕೀಯ ವರದಿಗಳನ್ನು ಕೂಲಂಕಷವಾಗಿ ನೋಡಿಲ್ಲ. ಸದ್ಯ ನಡೆಯುತ್ತಿರುವ ಸರಣಿಯಲ್ಲಿ ಮಾತ್ರ ಆಡುತ್ತಿಲ್ಲ’ ಎಂದರು. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು