ಬಾಂಗ್ಲಾ ಹುಲಿಗಳು–ಸಿಂಹಳೀಯರ ಕದನಕ್ಕೆ ಮಳೆ ಅಡ್ಡಿ; ಪಂದ್ಯ ರದ್ದು

ಭಾನುವಾರ, ಜೂನ್ 16, 2019
22 °C
ವಿಶ್ವಕಪ್‌ ಕ್ರಿಕೆಟ್‌

ಬಾಂಗ್ಲಾ ಹುಲಿಗಳು–ಸಿಂಹಳೀಯರ ಕದನಕ್ಕೆ ಮಳೆ ಅಡ್ಡಿ; ಪಂದ್ಯ ರದ್ದು

Published:
Updated:

ಬ್ರಿಸ್ಟಲ್: ಬೆಳಗ್ಗಿನಿಂದಲೂ ಮಳೆ ಸುರಿಯುತ್ತಿರುವುದರಿಂದ ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಡುವಿನ ಪಂದ್ಯಕ್ಕೆ ಅಡ್ಡಿಯಾಯಿತು. ಆಟಕ್ಕೆ ಸಹಕಾರಿಯಲ್ಲದ ವಾತಾವರಣದ ಕಾರಣದಿಂದ ಪಂದ್ಯ ರದ್ದು ಪಡಿಸಲಾಗಿದೆ. ಟಾಸ್‌ ಕೂಡಾ ನಡೆಸಲು ಸಾಧ್ಯವಾಗಿರಲಿಲ್ಲ.

ಪಂದ್ಯ ರದ್ದುಗೊಂಡಿರುವ ಕಾರಣ ಉಭಯ ತಂಡಗಳಿಗೆ ಒಂದೊಂದು ಪಾಯಿಂಟ್‌ ಹಂಚಿಕೆಯಾಗಿದೆ. ಪಾಯಿಂಟ್‌ ಪಟ್ಟಿಯಲ್ಲಿ ಶ್ರೀಲಂಕಾ ಮತ್ತು ವೆಸ್ಟ್‌ ಇಂಡೀಸ್‌ ಕ್ರಮವಾಗಿ 5 ಮತ್ತು 6ನೇ ಸ್ಥಾನ ಪಡೆದಿವೆ. 

ಬಾಂಗ್ಲಾದೇಶ ತಂಡ ಸತತ ಎರಡು ಸೋಲಿನಿಂದ ಕಂಗಾಲಾಗಿದೆ. ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳ ಹೀನಾಯ ಸೋಲನುಭವಿಸಿದ ಶ್ರೀಲಂಕಾ ನಂತರ ಪುಟಿದೆದ್ದಿದೆ. ಅಫ್ಗಾನಿಸ್ತಾನವನ್ನು ಮಣಿಸಿರುವ ದಿಮುತ್ ಕರುಣಾರತ್ನೆ ಬಳಗ, ತನ್ನ ಮೂರನೇ ಪಂದ್ಯದಲ್ಲಿ ಪಾಕಿಸ್ತಾನ ಎದುರು ಮಳೆಯ ಕಾರಣ ಒಂದು ಪಾಯಿಂಟ್‌ಗೆ ಸಮಾಧಾನಪಡಬೇಕಾಯಿತು.

ಬಾಂಗ್ಲಾ ಹುಲಿಗಳು ಟೂರ್ನಿಯಲ್ಲಿ ಉತ್ತಮ ಆರಂಭವನ್ನೇನೊ ಮಾಡಿದ್ದರು. ದಕ್ಷಿಣ ಆಫ್ರಿಕಾವನ್ನು ಮಣಿಸಿದ ತಂಡ ಆ ಪಂದ್ಯದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ತನ್ನ ಗರಿಷ್ಠ ಮೊತ್ತ (6ಕ್ಕೆ 330) ದಾಖಲಿಸಿ ಗಮನ ಸೆಳೆದಿತ್ತು. ಆದರೆ ನಂತರದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೋರಾಡಿದರೂ ಎರಡು ವಿಕೆಟ್‌ಗಳಿಂದ ಸೋಲನುಭವಿತು. ಆತಿಥೇಯ ಇಂಗ್ಲೆಂಡ್‌ ತಂಡವಂತೂ 106 ರನ್‌ಗಳಿಂದ ಸುಲಭವಾಗಿ ಬಾಂಗ್ಲಾ ವಿರುದ್ಧ ಜಯಗಳಿಸಿತ್ತು.

ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಮಾತ್ರ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಮೊದಲ ಎರಡು ಪಂದ್ಯಗಳಲ್ಲಿ ಅರ್ಧಶತಕಗಳನ್ನು ಗಳಿಸಿದ್ದ ಅವರು ಇಂಗ್ಲೆಂಡ್ ವಿರುದ್ಧ ಶತಕ ದಾಖಲಿಸಿ ಮಿಂಚಿದ್ದರು. ಹೀಗಾಗಿ ಬ್ಯಾಟಿಂಗ್ ವಿಭಾಗದ ಜವಾಬ್ದಾರಿ ಅವರ ಹೆಗಲೇರಿದೆ.  ಬೌಲಿಂಗ್ ವಿಭಾಗ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿಲ್ಲ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬೌಲರ್‌ಗಳು 386 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. 

ಬೆರಳಿನ ಗಾಯದ ಸಮಸ್ಯೆಯಿಂದಾಗಿ ಶ್ರೀಲಂಕಾ ವೇಗದ ಬೌಲರ್‌ ನುವಾನ್‌ ಪ್ರದೀಪ್‌ ಅಲಭ್ಯ ಈ ಪಂದ್ಯದಿಂದ ಹೊರಗುಳಿದಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !