ಮುಂಬೈ : ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ 2026ರ ಫೆಬ್ರುವರಿ 7ರಿಂದ ಮಾರ್ಚ್ 8ರವರೆಗೆ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳ ಟಿಕೆಟ್ ಮಾರಾಟವನ್ನು ಗುರುವಾರ ಆರಂಭಿಸಲಾಗಿದೆ.

ಪಂದ್ಯಗಳಿಗೆ ಹೆಚ್ಚಿನ ಕ್ರೀಡಾಭಿಮಾನಿಗಳನ್ನು ಆಕರ್ಷಿಸಲು ಆರಂಭಿಕ ಹಂತದಲ್ಲಿ ಟಿಕೆಟ್ ದರವನ್ನು ಕಡಿಮೆ ಮಾಡಲಾಗಿದೆ. ಭಾರತದಲ್ಲಿ
₹ 100 ಹಾಗೂ ಶ್ರೀಲಂಕಾದಲ್ಲಿ 1,000 ಎಲ್ಕೆಆರ್ನಲ್ಲಿ ಟಿಕೆಟ್ ದರ ಆರಂಭವಾಗಲಿದೆ ಎಂದು ಐಸಿಸಿ ತಿಳಿಸಿದೆ.

10ನೇ ಆವೃತ್ತಿಯ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಭಾರತದ ಐದು ಹಾಗೂ ಶ್ರೀಲಂಕಾದ ಮೂರು ತಾಣಗಳಲ್ಲಿ ಪಂದ್ಯಗಳು ನಡೆಯಲಿವೆ. ಭಾರತದ ಅಹಮದಾಬಾದ್, ಚೆನ್ನೈ, ನವದೆಹಲಿ, ಮುಂಬೈ ಮತ್ತು ಕೋಲ್ಕತ್ತದಲ್ಲಿ ಪಂದ್ಯಗಳು ಆಯೋಜನೆಗೊಂಡಿವೆ.

ಉದ್ಘಾಟನಾ ದಿನ ಮೂರು ಪಂದ್ಯಗಳು ನಡೆಯಲಿವೆ. ಹಾಲಿ ಚಾಂಪಿಯನ್ ಭಾರತ ತಂಡವು ಫೆ.7ರಂದು ಅಮೆರಿಕ ತಂಡ ವಿರುದ್ಧ ಅಭಿಯಾನ ಆರಂಭಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.