ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) ಕ್ರಿಕೆಟ್ ಟೂರ್ನಿಯ ತನ್ನ ಕೊನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿದಿದೆ.
ಇಲ್ಲಿನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಪಡೆ ಬೌಲಿಂಗ್ ಆಯ್ದುಕೊಂಡಿದೆ.
ಸ್ಮೃತಿ ಮಂದಾನ ನಾಯಕತ್ವದ ಆರ್‌ಸಿಬಿ ಗುಂಪು ಹಂತದಲ್ಲಿ ಆಡಿರುವ ಏಳು ಪಂದ್ಯಗಲ್ಲಿ ಎರಡು ಜಯ ಹಾಗೂ ಐದು ಸೋಲುಗಳನ್ನು ಕಂಡಿದೆ. ಹೀಗಾಗಿ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಆದರೆ, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಂಬೈಗೆ ನೇರವಾಗಿ ಫೈನಲ್ ತಲುಪಲು ಇಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ. ಹಾಗಾಗಿ ಪಂದ್ಯ ಮಹತ್ವ ಪಡೆದುಕೊಂಡಿದೆ.
ಇನಿಂಗ್ಸ್ ಆರಂಭಿಸಿರುವ ಆರ್‌ಸಿಬಿಗೆ ಆರಂಭಿಕ ಆಘಾತ ಎದುರಾಗಿದೆ. ನಾಯಕಿ ಸ್ಮೃತಿ ಜೊತೆ ಕ್ರೀಸ್‌ಗಿಳಿದ ಸೋಫಿ ಡಿವೈನ್ ಖಾತೆ ತೆರೆಯುವ ಮೊದಲೇ ಪೆವಿಲಿಯನ್ ಸೇರಿಕೊಂಡಿದ್ದಾರೆ. ಇದೀಗ ಎಲಿಸ್ ಪೆರ್ರಿ ಆಗಮಿಸಿದ್ದಾರೆ. ತಂಡದ ಮೊತ್ತ ಮೊದಲ ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 1 ರನ್ ಆಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.