ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WPL: ಮುಂಬೈ ಇಂಡಿಯನ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 29 ರನ್ ಅಂತರದ ಜಯ

Published 5 ಮಾರ್ಚ್ 2024, 18:17 IST
Last Updated 5 ಮಾರ್ಚ್ 2024, 18:17 IST
ಅಕ್ಷರ ಗಾತ್ರ

ನವದೆಹಲಿ: ಮಹಿಳೆಯರ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 29 ರನ್‌ಗಳ ಅಂತರದಲ್ಲಿ ಜಯ ಸಾಧಿಸಿದೆ.

ದೆಹಲಿಯಲ್ಲಿ ನಡೆದ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ನಾಯಕಿ ಮೆಗ್ ಲ್ಯಾನಿಂಗ್(53) ಮತ್ತು ಜೆಮಿಮಾ ರಾಡ್ರಿಗಾಸ್(69) ಅವರ ಅರ್ಧಶತಕಗಳ ನೆರವಿನಿಂದ ಡೆಲ್ಲಿ ತಂಡ 20 ಓವರ್‌ಗಳ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 192 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

193 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ತಂಡ 20 ಓವರ್‌ಗೆ 8 ವಿಕೆಟ್‌ ನಷ್ಟಕ್ಕೆ 163 ರನ್‌ ಅಷ್ಟೇ ಗಳಿಸಲು ಶಕ್ತವಾಯಿತು.

ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಅಗ್ರ ಸ್ಥಾನದಲ್ಲಿದೆ. ಮುಂಬೈ ತಂಡ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT