ವಡೋದರ: ನ್ಯಾಟ್ ಸಿವರ್-ಬ್ರಂಟ್ ಅವರ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 15 ರನ್ಗಳ ಗೆಲುವು ಸಾಧಿಸಿದೆ.

ಸೋಮವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು, 20 ಓವರ್ಗಳ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಆರ್ಸಿಬಿ ತಂಡವು, 9 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರ್ತಿ ಹೇಲಿ ಮ್ಯಾಥ್ಯೂಸ್ (56 ರನ್; 39 ಎಸೆತ) ಉತ್ತಮ ಆಟವಾಡಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ನ್ಯಾಟ್ ಸಿವರ್-ಬ್ರಂಟ್ ಅವರು ಕೇವಲ 57 ಎಸೆತಗಳಲ್ಲಿ 16 ಬೌಂಡರಿ, 1 ಸಿಕ್ಸರ್ ಸಹಿತ 100 ರನ್ ಗಳಿಸಿ ಅಜೇಯರಾಗಿ ಉಳಿದರು. ಟೂರ್ನಿಯಲ್ಲಿ ದಾಖಲಾದ ಮೊದಲ ಶತಕ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.