ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಬ್ಲ್ಯುಪಿಎಲ್ ಮಾರ್ಚ್ 4ರಿಂದ

Last Updated 6 ಫೆಬ್ರುವರಿ 2023, 16:15 IST
ಅಕ್ಷರ ಗಾತ್ರ

ನವದೆಹಲಿ: ಪ್ರಪ್ರಥಮ ಮಹಿಳೆಯರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 4 ರಿಂದ 26ರವರೆಗೆ ಆಯೋಜನೆಗೊಳ್ಳಲಿದೆ.

ಮುಂಬೈನ ಬ್ರೆಬೊರ್ನ್ ಕ್ರೀಡಾಂಗಣ ಹಾಗೂ ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ಟೂರ್ನಿಯು ನಡೆಯಲಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು ಮುಖಾಮುಖಿಯಾಗುವ ಸಾಧ್ಯತೆ ಇದೆ.

‘ಇದೇ ಮೊದಲ ಸಲ ಮಹಿಳಾ ಐಪಿಎಲ್ ಪೂರ್ಣಪ್ರಮಾಣದಲ್ಲಿ ಆಯೋಜನೆಗೊಳ್ಳಲಿದೆ. ಮುಂಬೈನಲ್ಲಿ ಮಾರ್ಚ್ 4ರಿಂದ 26ರವರೆಗೆ ನಡೆಯುವುದು’ ಎಂದು ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಸೋಮವಾರ ತಿಳಿಸಿದ್ದಾರೆ.

ಮುಂಬೈನಲ್ಲಿ ಇದೇ 13ರಂದು ಆಟಗಾರ್ತಿಯರ ಹರಾಜು ಪ್ರಕ್ರಿಯೆ ಜರುಗಲಿದೆ. 1500 ಆಟಗಾರ್ತಿಯರು ನೋಂದಣಿ ಮಾಡಿಕೊಂಡಿದ್ಧಾರೆ. ಇದೇ ವಾರ ಅಂತಿಮ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

12ರಂದು ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಭಾರತವು ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಈಚೆಗೆ ನಡೆದಿದ್ದ ತಂಡಗಳ ಬಿಡ್‌ನಲ್ಲಿ ಬಿಸಿಸಿಐಗೆ ₹4669 ಕೋಟಿ ಲಭಿಸಿತ್ತು. ಐದು ತಂಡಗಳು ಮಾರಾಟವಾಗಿದ್ದವು. ಮುಂಬೈ ಇಂಡಿಯನ್ಸ್‌, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಕ್ಯಾಪ್ರಿ ಗ್ಲೋಬಲ್ ಹೋಲ್ಡಿಂಗ್ಸ್‌ (ಲಖನೌ) ಹಾಗೂ ಅದಾನಿ ಸ್ಪೋರ್ಟ್ಸ್‌ಲೈನ್ ತಂಡಗಳನ್ನು ಖರೀದಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT