ಶನಿವಾರ, ಜೂನ್ 25, 2022
24 °C

ಡಬ್ಲ್ಯುಟಿಸಿ ಫೈನಲ್: ಇಲಿಂಗ್‌ವರ್ಥ್, ಗೌ ಅಂಪೈರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದುಬೈ (ಪಿಟಿಐ): ಇದೇ ತಿಂಗಳು ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್‌ನ ರಿಚರ್ಡ್‌ ಇಲ್ಲಿಂಗ್‌ವರ್ಥ್‌ ಮತ್ತು ಮೈಕೆಲ್ ಗೌ ಅಂಪೈರ್ ಆಗಿ ಕಾರ್ಯನಿರ್ವಹಿಸುವರು.

ಇಂಗ್ಲೆಂಡ್ ತಂಡದ ಮಾಜಿ ಆರಂಭಿಕ ಆಟಗಾರ ಕ್ರಿಸ್ ಬ್ರಾಡ್ ಅವರು ಪಂದ್ಯ ರೆಫರಿಯಾಗಿ ನೇಮಕವಾಗಿದ್ದಾರೆ.  ಅನುಭವಿ ಅಂಪೈರ್ ರಿಚರ್ಡ್ ಕೆಟಲ್‌ಬರೊ ಮತ್ತು ಎಲೆಕ್ಸ್ ವಾರ್ಫ್  ಅವರು ಟಿ.ವಿ. ಅಂಪೈರ್ ಆಗಿ ನೇಮಕವಾಗಿದ್ದಾರೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಜೂನ್ 18ರಂದು ಸೌತಾಂಪ್ಟನ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡವು ಡಬ್ಲ್ಯುಟಿಸಿ  ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ. 

‘ಅನುಭವಿ ಅಂಪೈರ್‌ ಮತ್ತು ರೆಫರಿಗಳು ಇರುವ ತಂಡವನ್ನು ಆಯ್ಕೆ ಮಾಡಲಾಗಿದೆ. ಇಂದಿನ ಕೋವಿಡ್ ಪರಿಸ್ಥಿತಿಯಲ್ಲಿ ಟೆಸ್ಟ್ ಕ್ರಿಕೆ್ಟ್‌ನಲ್ಲಿ ಅಂಪೈರಿಂಗ್ ಕೆಲಸ ಸುಲಭವಲ್ಲ ತಮ್ಮ ವೃತ್ತಿಜೀವನದುದ್ದಕ್ಕೂ ನಿರಂತರವಾಗಿ ಉತ್ತಮ ಸಾಧನೆ ಮಾಡುತ್ತಿರುವ ಈ ಅಂಪೈರ್‌ಗಳು ಇಲ್ಲಿಯೂ ಉತ್ತಮ ತೀರ್ಪುಗಳನ್ನು ನೀಡುವ ಭರವಸೆ ಇದೆ‘ ಎಂದು ಐಸಿಸಿ ಹಿರಿಯ ವ್ಯವಸ್ಥಾಪಕ ಅಡ್ರೇನ್ ಗ್ರಿಫಿತ್ ತಿಳಿಸಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು