ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

IND vs ENG: ರಾಂಚಿ ಟೆಸ್ಟ್ ಪಂದ್ಯದಲ್ಲಿ ಜೈಸ್ವಾಲ್ ವಿಶಿಷ್ಟ ಸಾಧನೆ

Published 24 ಫೆಬ್ರುವರಿ 2024, 10:47 IST
Last Updated 24 ಫೆಬ್ರುವರಿ 2024, 10:47 IST
ಅಕ್ಷರ ಗಾತ್ರ

ರಾಂಚಿ: ಅಮೋಘ ಬ್ಯಾಟಿಂಗ್ ಲಯದಲ್ಲಿರುವ ಭಾರತದ ಯುವ ಎಡಗೈ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್, ಟೆಸ್ಟ್ ಕ್ರಿಕೆಟ್‌ನಲ್ಲಿ ಮಗದೊಂದು ಸಾಧನೆ ಮಾಡಿದ್ದಾರೆ.

ಟೆಸ್ಟ್ ಸರಣಿಯೊಂದರಲ್ಲಿ 600 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಭಾರತದ ಐದನೇ ಬ್ಯಾಟರ್ ಎನಿಸಿದ್ದಾರೆ.

ಈ ಮೂಲಕ ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಮತ್ತು ದಿಲೀಪ್ ಸರ್ದೇಸಾಯಿ ಸಾಲಿನಲ್ಲಿ ಜೈಸ್ವಾಲ್ ಕಾಣಿಸಿಕೊಂಡಿದ್ದಾರೆ.

ರಾಂಚಿಯಲ್ಲಿ ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಗಳಿಸಿರುವ ಜೈಸ್ವಾಲ್ ಈ ಸಾಧನೆ ಮಾಡಿದ್ದಾರೆ.

22ರ ಹರೆಯದ ಜೈಸ್ವಾಲ್ ಇದೇ ಸರಣಿಯಲ್ಲಿ ಸತತ ಎರಡು ದ್ವಿಶತಕಗಳನ್ನು ಬಾರಿಸಿದ್ದಾರೆ.

ಈ ಪೈಕಿ ಗವಾಸ್ಕರ್, ಕೊಹ್ಲಿ ಹಾಗೂ ದ್ರಾವಿಡ್, ತಮ್ಮ ವೃತ್ತಿ ಜೀವನದಲ್ಲಿ ಎರಡು ಸಲ ಟೆಸ್ಟ್ ಸರಣಿಯೊಂದರಲ್ಲಿ 600ಕ್ಕೂ ಹೆಚ್ಚು ರನ್‌ಗಳ ಸಾಧನೆ ಮಾಡಿದ್ದಾರೆ.

ಟೆಸ್ಟ್ ಸರಣಿಯೊಂದರಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಗವಾಸ್ಕರ್ (774 ರನ್) ಹೆಸರಲ್ಲಿದೆ. ಅಲ್ಲದೆ ಟೆಸ್ಟ್ ಸರಣಿಯೊಂದರಲ್ಲಿ ಎರಡು ಸಲ 700ಕ್ಕೂ ಹೆಚ್ಚು ರನ್ ಗಳಿಸಿದ ಏಕಮಾತ್ರ ಭಾರತೀಯ ಬ್ಯಾಟರ್ ಎಂಬ ದಾಖಲೆಯೂ ಗವಾಸ್ಕರ್ ಹೆಸರಲ್ಲಿದೆ.

ಟೆಸ್ಟ್ ಸರಣಿಯೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಆಸ್ಟ್ರೇಲಿಯಾದ ದಂತಕಥೆ ಡಾನ್ ಬ್ರಾಡ್ಮನ್ (974 ರನ್) ಹೆಸರಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT