ಶುಕ್ರವಾರ, ಏಪ್ರಿಲ್ 10, 2020
19 °C

ದೆಹಲಿ ಹಿಂಸಾಚಾರ: ಶಾಂತಿ ಕಾಪಾಡುವಂತೆ ಮನವಿ ಮಾಡಿದ ಸೆಹ್ವಾಗ್, ಯುವರಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್‌ ಮತ್ತು ಯುವರಾಜ್‌ ಸಿಂಗ್‌, ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.

ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್‌, ‘ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ದುರದೃಷ್ಟಕರವಾದದ್ದು. ಶಾಂತವಾಗಿರುವಂತೆ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ಯಾರೊಬ್ಬರಿಗೆ ಆಗುವ ಗಾಯ ಅಥವಾ ಯಾರೊಬ್ಬರು ಮಾಡುವ ದಾಳಿಯು ರಾಷ್ಟ್ರ ರಾಜಧಾನಿಗೆ ಅಂಟುವ ಕಳಂಕವಾಗಲಿದೆ. ಶಾಂತಿ ಮೂಡಲಿ ಮತ್ತು ಎಲ್ಲರಿಗೂ ತಿಳುವಳಿಕೆ ಬರಲೆಂದು ಆಶಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

‘ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವು ಹೃದಯವನ್ನು ಘಾಸಿಗೊಳಿಸುವಂತದ್ದು. ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಪ್ರತಿಯೊಬ್ಬರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ಏನೇ ಆದರೂ ಕೊನೆಗೆ ನಾವೆಲ್ಲರೂ ಮನುಷ್ಯರೇ. ನಮೆಗೆಲ್ಲ ಪ್ರೀತಿ, ಗೌರವದ ಅಗತ್ಯವಿದೆ’ ಎಂದು ಯುವರಾಜ್‌ ಸಿಂಗ್‌ ಕರೆ ನೀಡಿದ್ದಾರೆ.

ಶಾಂತಿ ಕಾಪಾಡುವಂತೆ ಹರ್ಭಜನ್‌ ಸಿಂಗ್‌ ಅವರೂ ಮನವಿ ಮಾಡಿದ್ದಾರೆ.

ಎರಡು ದಿನಗಳ ಭೇಟಿ ಸಲುವಾಗಿ ಭಾರತ ಪ್ರವಾಸ ಕೈಗೊಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಫೆಬ್ರುವರಿ 24ರಂದು ಗುಜರಾತಿನ ಅಹಮದಾಬಾದ್‌ಗೆ ಭೇಟಿ ನೀಡಿದ್ದರು. ಇದೇ ವೇಳೆ ಸಿಎಎ ಪರ ಮತ್ತು ವಿರುದ್ಧ ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾ ಸ್ವರೂಪ ಪಡೆದುಕೊಂಡಿದ್ದು, ಸುಮಾರು 20 ಜನರು ಪ್ರಾಣ ಕಳೆದುಕೊಂಡಿದ್ದಾರೆ. 150ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು