ಸೋಮವಾರ, ಜೂನ್ 21, 2021
30 °C

ಆಸ್ಟ್ರೇಲಿಯಾ ಕಾಳ್ಗಿಚ್ಚು: ಯುವರಾಜ್ ಸಿಂಗ್ ಕಳವಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹವಾಮಾನ ಬದಲಾವಣೆಯ ಕುರಿತು ಗಂಭೀರವಾಗಿ ಚಿಂತಿಸಿ ಕ್ರಮ ಕೈಗೊಳ್ಳಲು ಇದು ತುರ್ತು ಸಮಯ. ಆಸ್ಟ್ರೇಲಿಯಾದ ಕಾಳ್ಗಿಚ್ಚಿನ ಘಟನೆಯಿಂದ ನಾವು ಎಚ್ಚೆತ್ತುಕೊಳ್ಳಬೇಕಿದೆ ಎಂದು ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

‘ಆಸ್ಟ್ರೇಲಿಯಾದಲ್ಲಿ ಈಗಾಗಲೇ ಅಪಾರ ಪ್ರಮಾಣದ ಕಾಡು ಬೆಂಕಿಗಾಹುತಿಯಾಗಿದೆ. 4.8 ಕೋಟಿ ಪ್ರಾಣಿಗಳು ಅಸುನೀಗಿವೆ. ಇದು ಹವಾಮಾನ ವೈಪರಿತ್ಯದ ಪರಿಣಾಮವಾಗಿದೆ. ಕೆಲವರು ಮೃತಪಟ್ಟಿದ್ದಾರೆ. ಇದು ಮುನ್ನೆಚ್ಚರಿಕೆ ವಹಿಸಲು ಸೂಕ್ತ ಸಮಯ. ಅಲ್ಲಿಯ ಜನರ ಸುರಕ್ಷತೆಗೆ ಪ್ರಾರ್ಥನೆ ಮಾಡೋಣ’ ಎಂದು ಯುವಿ ಟ್ವೀಟ್‌ ಮಾಡಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಕಾಳ್ಗಿಚ್ಚಿನಿಂದಾಗಿ 18 ಮಂದಿ ಸಾವನ್ನಪ್ಪಿದ್ದಾರೆ.  ಶುಕ್ರವಾರದಿಂದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಣ ಮೂರನೇ ಟೆಸ್ಟ್‌ ಆರಂಭವಾಗಲಿದೆ.  ಆತಿಥೇಯ ತಂಡದ ಆಟಗಾರ ಡೇವಿಡ್ ವಾರ್ನರ್ ಮಾಡಿರುವ ಟ್ವೀಟ್ ಸಂದೇಶವೊಂದು ಎಲ್ಲರ ಗಮನ ಸೆಳೆದಿದೆ.

ತನ್ನ ಸಾಕುನಾಯಿಯೊಂದಿಗೆ ಇರುವ ವ್ಯಕ್ತಿಯೊಬ್ಬ ಕಾಳ್ಗಿಚ್ಚನ್ನು ನೋಡುತ್ತ ಕುಳಿತಿರುವ ಚಿತ್ರವನ್ನು ಟ್ವೀಟ್ ಮಾಡಿರುವ ವಾರ್ನರ್,  ಬೆಂಕಿ ನಂದಿಸಲು ಹೋರಾಡುತ್ತಿರುವ ಸಿಬ್ಬಂದಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

‘ನಾಳೆ (ಶುಕ್ರವಾರ) ಪಂದ್ಯವನ್ನು ಆಡಲು ನಮ್ಮ ಹಾಗೂ ನ್ಯೂಜಿಲೆಂಡ್ ತಂಡಗಳ ಆಟಗಾರರು ನಿಮಗೆ ಚಿರ ಋಣಿಯಾಗಿರುತ್ತೇವೆ. ನಿಮ್ಮಂತಹವರ ಸೇವೆಯಿಂದ ನಾವು ಸುರಕ್ಷಿತವಾಗಿದ್ದೇವೆ. ನಾವು, ನಮ್ಮ ಕುಟುಂಬ, ಆತ್ಮೀಯರೆಲ್ಲರೂ ನಿಮಗೆ ಧನ್ಯವಾದ ಅರ್ಪಿಸುತ್ತೇವೆ’ ಎಂದು ಬರೆದಿದ್ದಾರೆ.

ಹೋದ ತಿಂಗಳು ಕಾಳ್ಗಿಚ್ಚಿನಿಂದಾಗಿ ಸಿಡ್ನಿಯಲ್ಲಿಯೂ ಆವರಿಸಿದ್ದ ದಟ್ಟವಾದ ಹೊಗೆ ಮತ್ತು  ವಾಯುಮಾಲಿನ್ಯದ ಕಾರಣಕ್ಕೆ ಬಿಗ್‌ಬ್ಯಾಷ್ ಲೀಗ್ ಪಂದ್ಯವನ್ನು ರದ್ದು ಮಾಡಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು