ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಹುದ್ದೆಗೆ ಜಹೀರ್, ಬಾಲಾಜಿ ಹೆಸರು

Published 10 ಜುಲೈ 2024, 10:27 IST
Last Updated 10 ಜುಲೈ 2024, 10:27 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್ ತಂಡ ಮುಖ್ಯ ಕೋಚ್ ಆಗಿ ಮಂಗಳವಾರ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಇದರ ಬೆನ್ನಲ್ಲೇ, ಬೌಲಿಂಗ್ ಕೋಚ್ ಯಾರೆಂಬ ಚರ್ಚೆ ಶುರುವಾಗಿದ್ದು, ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್‌ಗಳಾದ ಜಹೀರ್ ಖಾನ್ ಮತ್ತು ಲಕ್ಷ್ಮೀಪತಿ ಬಾಲಾಜಿ ಹೆಸರುಗಳು ಮುಂಚೂಣಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.

‘ಬೌಲಿಂಗ್ ಕೋಚ್ ಸ್ಥಾನಕ್ಕೆ ಜಹೀರ್ ಖಾನ್ ಅಥವಾ ಲಕ್ಷ್ಮೀಪತಿ ಬಾಲಾಜಿ ಅವರನ್ನು ನೇಮಕ ಮಾಡುವ ಕುರಿತಂತೆ ಬಿಸಿಸಿಐ ಚರ್ಚೆ ನಡೆಸುತ್ತಿದೆ. ಮತ್ತೊಬ್ಬ ಮಾಜಿ ವೇಗಿ ವಿನಯ್ ಕುಮಾರ್ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ’ಎಂದು ಮೂಲಗಳು ತಿಳಿಸಿವೆ.

92 ಟೆಸ್ಟ್ ಪಂದ್ಯಗಳಿಂದ ಜಹೀರ್ 311 ವಿಕೆಟ್ ಪಡೆದಿದ್ದಾರೆ. ಎಲ್ಲ ಮಾದರಿ ಸೇರಿ 309 ಅಂತರರಾಷ್ಟ್ರೀಯ ಪಂದ್ಯಗಳಿಂದ ಒಟ್ಟು 610 ವಿಕೆಟ್ ಪಡೆದಿದ್ದಾರೆ.

ಭಾರತ ಕ್ರಿಕೆಟ್ ತಂಡದಲ್ಲಿ ಆಡಿದ ಖ್ಯಾತ ಎಡಗೈ ವೇಗದ ಬೌಲರ್‌ಗಳಲ್ಲಿ ಒಬ್ಬರು ಎಂದು ಜಹೀರ್ ಅವರನ್ನು ಪರಿಗಣಿಸಲಾಗಿದೆ.

8 ಟಸ್ಟ್ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಲಕ್ಷ್ಮೀಪತಿ ಬಾಲಾಜಿ 27 ವಿಕೆಟ್ ಪಡೆದಿದ್ದಾರೆ. 30 ಏಕದಿನ ಪಂದ್ಯಗಳನ್ನು ಆಡಿರುವ ಅವರು 34 ವಿಕೆಟ್ ಗಳಿಸಿದ್ದಾರೆ.

ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕದ ಬೆನ್ನಲ್ಲೇ ಸಹಾಯಕ ಸಿಬ್ಬಂದಿ ನೇಮಕ ಪ್ರಕ್ರಿಯೆಗೂ ಬಿಸಿಸಿಐ ಚಾಲನೆ ನೀಡಿದೆ.

ಬೌಲಿಂಗ್ ಕೋಚ್ ಪಾರಸ್ ಮಹಾಂಬ್ರೆ ಅವಧಿ ಸಹ ಮುಗಿಯುತ್ತಾ ಬಂದಿದೆ.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರ ಎಕ್ಸ್ ಪೋಸ್ಟ್ ಮೂಲಕ ಪ್ರಕಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT