ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ದೀಪನ ಮದ್ದು ಸೇವನೆ ಆರೋಪ: ಜಿಂಬಾಬ್ವೆ ಕ್ರಿಕೆಟಿಗರಿಬ್ಬರು ಅಮಾನತು

Published 21 ಡಿಸೆಂಬರ್ 2023, 23:30 IST
Last Updated 21 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

‌ಹರಾರೆ: ನಿಷೇಧಿತ ಉದ್ದೀಪನ ಮದ್ದು ಸೇವಿಸಿದ ಆರೋಪದ ಮೇಲೆ ಜಿಂಬಾಬ್ವೆ ಕ್ರಿಕೆಟ್‌ ತಂಡದ ಆಲ್‌ರೌಂಡರ್‌ಗಳಾದ ವೆಸ್ಲಿ ಮಾಧೆವೆರೆ ಮತ್ತು ಬ್ರ್ಯಾಂಡನ್ ಮಾವುಟಾ ಅವರನ್ನು ಜಿಂಬಾಬ್ವೆ ಕ್ರಿಕೆಟ್‌ ಗುರುವಾರ ಅಮಾನತುಗೊಳಿಸಿದೆ.

23 ವರ್ಷದ ಮಾಧೆವೆರೆ ಜಿಂಬಾಬ್ವೆ ತಂಡದ ಪರ ಎಲ್ಲ ಮಾದರಿಗಳಲ್ಲಿ 98 ಪಂದ್ಯಗಳಲ್ಲಿ ಆಡಿದ್ದಾರೆ. ಡಿ.10ರಂದು ಐರ್ಲೆಂಡ್ ವಿರುದ್ಧ ಕೊನೆಯ ಟಿ20 ಪಂದ್ಯ ಆಡಿದ್ದರು. 26 ವರ್ಷದ ಮಾವುಟಾ 26 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಅವರೂ ಐರ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.

‘ಇಬ್ಬರನ್ನೂ ಎಲ್ಲಾ ಕ್ರಿಕೆಟ್ ಚಟುವಟಿಕೆಗಳಿಂದ ತಕ್ಷಣವೇ ಅಮಾನತುಗೊಳಿಸಿದೆ. ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು’ ಎಂದು ಜಿಂಬಾಬ್ವೆ ಕ್ರಿಕೆಟ್‌ ಆಡಳಿತ ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT