ಬುಧವಾರ, ಜೂನ್ 3, 2020
27 °C

ನಿಗದಿತ ಸಮಯದಲ್ಲೇ ವಿಶ್ವಕಪ್‌: ಎಐಎಫ್‌ಎಫ್‌ ವಿಶ್ವಾಸ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಫಿಫಾ 17 ವರ್ಷದೊಳಗಿನವರ ಮಹಿಳಾ ವಿಶ್ವಕಪ್‌ ಫುಟ್‌ಬಾಲ್‌ ಟೂರ್ನಿ ನಿಗದಿತ ವೇಳಾಪಟ್ಟಿಯ ಪ್ರಕಾರವೇ ನಡೆಯಲಿದೆ’ ಎಂದು ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ (ಎಐಎಫ್‌ಎಫ್‌) ವಿಶ್ವಾಸ ವ್ಯಕ್ತಪಡಿಸಿದೆ.

‘ಈ ವರ್ಷದ ನವೆಂಬರ್‌ನಲ್ಲಿ ಟೂರ್ನಿ ನಡೆಸಲು ತೀರ್ಮಾನಿಸಲಾಗಿದೆ. ಅಷ್ಟರೊಳಗೆ ಕೊರೊನಾ ಬಿಕ್ಕಟ್ಟು ಬಗೆಹರಿಯುವ ಸಾಧ್ಯತೆ ಇದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಏನು ಮಾಡಬೇಕು ಎಂಬುದರ ಕುರಿತು ಫಿಫಾ, ಸೂಕ್ತ ತೀರ್ಮಾನ ಕೈಗೊಳ್ಳಲಿದೆ’ ಎಂದು ಎಐಎಫ್‌ಎಫ್‌ ಮಹಾ ಕಾರ್ಯದರ್ಶಿ ಕುಶಾಲ್‌ ದಾಸ್‌ ತಿಳಿಸಿದ್ದಾರೆ.

ನವೆಂಬರ್‌ 2ರಿಂದ 21ರವರೆಗೆ ನಿಗದಿಯಾಗಿರುವ ಟೂರ್ನಿಯ ಪಂದ್ಯಗಳು ನವಿ ಮುಂಬೈ, ಕೋಲ್ಕತ್ತ, ಅಹಮದಾಬಾದ್‌, ಭುವನೇಶ್ವರ ಹಾಗೂ ಗುವಾಹಟಿಯಲ್ಲಿ ನಡೆಯಲಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು